ನೇಪಾಳದಲ್ಲಿ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಇದೀಗ ಅತೀಯಾದ ಕ್ರೌರ್ಯಕ್ಕೆ ಕಾರಣವಾಗಿದೆ. ಅನೇಕ ಸಾವು ನೋವುಗಳು ಸಂಭವಿಸುತ್ತಾ ಇವೆ.
ಪ್ರತಿಭಟನೆಯಿಂದ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿ ದೇಶ ಬಿಟ್ಟು ಹೋಗಿದ್ದಾರೆ. “ದೇಶದಲ್ಲಿನ ಪ್ರತಿಕೂಲ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮತ್ತು ಸಂವಿಧಾನಕ್ಕೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಲು ರಾಜೀನಾಮೆ ನೀಡಿದ್ದೇನೆ” ಎಂದು ಒಲಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಮಂಗಳವಾರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ನೇಪಾಳದ ಪಾರ್ಲಿಮೆಂಟ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ಬೆಂಕಿ ಹಚ್ಚುತ್ತಿದ್ದು,ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತವಾಗಿ ಸುಟ್ಟುಹೋಗಿದ್ದಾರೆ. ಬೆಂಕಿಯಿಂದ ಸುಟ್ಟು ಹೋಗಿದ್ದ ರಾಜಲಕ್ಷ್ಮಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಲ್ಲಿ ಅವರು ಮರಣಹೊಂದಿದರು.
ಇಂಧನ ಸಚಿವ ಡೀಪಕ್ ಖಾಡ್ಕಾ ಅವರ ನಿವಾಸವನ್ನು ಹಾನಿಗೊಳಿಸಿದ್ದಾರೆ. ಹಣಕಾಸು ಸಚಿವರನ್ನು ಪ್ರತಿಭಟನಾಕಾರರು ರಸ್ತೆಯಲ್ಲಿ ಬೆನ್ನಟ್ಟಿ ಹೊಡೆಯುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಇಪ್ಪತ್ತಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಜನರು ಪೌದೆಲ್‌ರನ್ನು ಅಟ್ಟಿಸಿಕೊಂಡು ಹೋಗುವುದು ಮತ್ತು ಅವರು ಪ್ರಾಣ ಭಯದಿಂದ ಓಡುತ್ತಿರುವುದು ವೀಡಿಯೊದಲ್ಲಿ ಕಾಣುತ್ತದೆ. ಒಬ್ಬ ವ್ಯಕ್ತಿ ಅವರಿಗೆ ತುಳಿಯುವುದು ಮತ್ತು ಇತರರು ಹೊಡೆಯುವುದು ಕಾಣುತ್ತದೆ. ಸೋಶಿಯಲ್ ಮೀಡಿಯಾ ಬ್ಯಾನ್ ಜತೆಗೆ ಭ್ರಷ್ಟಾಚಾರ ವಿರೋಧಿಸಿ ನಡೆದ ಈ ಹೋರಾಟದಲ್ಲಿ ಇದುವರೆಗೆ 21ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 100ರಷ್ಟು ಮಂದಿ ಗಾಯಗೊಂಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


