Wednesday, August 5, 2026
spot_img
More
    spot_img
    HomeCrimeಬೀದರ್ ವಿಶ್ವವಿದ್ಯಾಲಯಕ್ಕೆ ಭಾರೀ ದಾಳಿ: ರಾಜ್ಯದಾದ್ಯಂತ 67 ಸ್ಥಳಗಳಲ್ಲಿ ಲೋಕಾಯುಕ್ತ ರೇಡ್

    ಬೀದರ್ ವಿಶ್ವವಿದ್ಯಾಲಯಕ್ಕೆ ಭಾರೀ ದಾಳಿ: ರಾಜ್ಯದಾದ್ಯಂತ 67 ಸ್ಥಳಗಳಲ್ಲಿ ಲೋಕಾಯುಕ್ತ ರೇಡ್

    ಬೀದರ್‌ನ ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದಲ್ಲಿ 2017-19ರ ಅವಧಿಯಲ್ಲಿ ಕೋಟ್ಯಂತರ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಭಾರಿ ಆಘಾತ ನೀಡಿದ್ದಾರೆ. ಬೆಂಗಳೂರು ಮೂಲದ ವೆಂಕಟ್ ರೆಡ್ಡಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ, ಲೋಕಾಯುಕ್ತದ 69 ತಂಡಗಳು ಕರ್ನಾಟಕದ 69 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿವೆ. ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಈ ದಾಳಿ ನಡೆದಿವೆ. ಸದ್ಯ, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

    Advertisement

    ಎಲ್ಲೆಲ್ಲಿ ಲೋಕಾಯುಕ್ತ ದಾಳಿ?

    ವಿವಿಧ ವರದಿ ಪ್ರಕಾರ, 2021 ರಲ್ಲಿ ನೀಡಲಾದ ದೂರು ತನಿಖೆಯ ವೇಳೆ ಸುಮಾರು 28 ಕೋಟಿ ರೂ. ಅವ್ಯವಹಾರ ಪತ್ತೆಯಾಗಿದ್ದು, ಪೀಠೋಪಕರಣ ಮತ್ತು ಸ್ಟೇಷನರಿ ಖರೀದಿಯಲ್ಲಿ ಅಕ್ರಮ ಪ್ರಕ್ರಿಯೆ ನಡೆದಿರುವುದು ದೃಢವಾಗಿದೆ. ಬೆಂಗಳೂರು, ಬೀದರ್, ಉಡುಪಿ, ಚಿಕ್ಕಮಗಳೂರು, ಕೊಪ್ಪಳ, ಹಾಸನ, ರಾಮನಗರ, ಕೋಲಾರ ಸೇರಿದಂತೆ ರಾಜ್ಯಾದ್ಯಂತ 69 ಸ್ಥಳಗಳಲ್ಲಿ 67 ತಂಡಗಳಿಂದ ದಾಳಿ ನಡೆಸಲಾಗಿದೆ.

    ಚಿಕ್ಕಮಗಳೂರಿನಲ್ಲಿಯೂ ಲೋಕಾಯುಕ್ತ ದಾಳಿ

    ಬೀದರ್‌ನ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್​ಪಿ ತಿರುಮಲೇಶ್ ನೇತೃತ್ವದಲ್ಲಿ, ವಿಶ್ವವಿದ್ಯಾಲಯದ ಮಾಜಿ ಕಂಟ್ರೋಲರ್ ಸುರೇಶ್ ಅವರ ಸಹೋದರ ಮಲ್ಲಿಕಾರ್ಜುನ್‌ ಅವರ ಚಿಕ್ಕಮಗಳೂರು ನಗರದ ನಿವಾಸದ ಮೇಲೆ ದಾಳಿ ನಡೆದಿದೆ. ಸುರೇಶ್ ಅವರು 2017ರಲ್ಲಿ ಬೀದರ್ ವಿಶ್ವವಿದ್ಯಾಲಯದಲ್ಲಿ ಕಂಟ್ರೋಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

    ಅನೈತಿಕ ಸಂಬಂಧಕ್ಕೆ ಅಡ್ಡಿ: ಮಗಳನ್ನೇ ಕೊಲೆ ಮಾಡಿದ ತಾಯಿ-ಪ್ರಿಯಕರ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading