Wednesday, September 2, 2026
spot_img
More
    spot_img
    HomeInternationalನೇಪಾಳದಲ್ಲಿ ಮುಂದುವರಿದ ಹಿಂಸಾಚಾರ: ಕಠ್ಮಂಡು ವಿಮಾನ ನಿಲ್ದಾಣ ಸೇನೆ ವಶಕ್ಕೆ

    ನೇಪಾಳದಲ್ಲಿ ಮುಂದುವರಿದ ಹಿಂಸಾಚಾರ: ಕಠ್ಮಂಡು ವಿಮಾನ ನಿಲ್ದಾಣ ಸೇನೆ ವಶಕ್ಕೆ

    ಕಠ್ಮಂಡು: ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

    Advertisement

    ನೇಪಾಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕಠ್ಮಂಡು ತ್ರಿಭುವನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ವಶಕ್ಕೆ ಪಡೆದಿದೆ.

    ಇನ್ನು ನವದೆಹಲಿ-ಕಠ್ಮಂಡು ನಡುವೆ ಪ್ರತಿ ದಿನ ಸಂಚರಿಸುವ ಏರ್‌ ಇಂಡಿಯಾ ವಿಮಾನಗಳು ರದ್ದಾಗಿವೆ. ಇಂಡಿಗೋ, ನೇಪಾಳ ಏರ್‌ಲೈನ್ಸ್‌ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ನೇಪಾಳದಲ್ಲಿ ಹಿಂಸಾಚಾರ ಮುಂದುವರಿದಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಮುಂದುವರಿದಿದೆ.

    ಇನ್ನು ಪ್ರತಿಭಟನಾಕಾರರು ಮಾಜಿ ಪ್ರಧಾನಿ ಜಲನಾಥ್‌ ಖಾನಲ್‌ ಅವರ ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರ ಪತ್ನಿ ರಾಜ್ಯಲಕ್ಷ್ಮೀ ಚಿತ್ರಾಕರ್‌ ಅವರು ಸಜೀವ ದಹನಗೊಂಡಿದ್ದಾರೆ.

    ಸಾಮಾಜಿಕ ಮಾಧ್ಯಮಗಳ ಮೇಲಿನ ಅಲ್ಪಾವಧಿಯ ನಿಷೇಧದ ವಿರುದ್ಧದ ಪ್ರತಿಭಟನೆಗಳು ಹೆಚ್ಚು ಹಿಂಸಾತ್ಮಕವಾಗಿ ಬೆಳೆದಿವೆ.

    ಬೀದರ್ ವಿಶ್ವವಿದ್ಯಾಲಯಕ್ಕೆ ಭಾರೀ ದಾಳಿ: ರಾಜ್ಯದಾದ್ಯಂತ 67 ಸ್ಥಳಗಳಲ್ಲಿ ಲೋಕಾಯುಕ್ತ ರೇಡ್

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading