ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿ ನಷ್ಟ ಆಗದಿದ್ದರೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ಅಪರಾಧ ಅಂಶಗಳು ಇಲ್ಲದಿದ್ದರೆ ಅಂತಹ ಕೇಸ್ಗಳನ್ನು ವಾಪಸ್ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅನೇಕ ಸಂದರ್ಭಗಳಲ್ಲಿ ಹಲವು ಪ್ರಕರಣ ವಾಪಸ್ ಪಡೆಯಲಾಗಿದೆ.
ರೈತರು, ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ಗಳನ್ನು ಹಿಂಪಡೆಯಲಾಗಿದೆ. ಅದಕ್ಕೊಂದು ಪ್ರಕ್ರಿಯೆ ಇದೆ. ಅದರಂತೆ ಕ್ರಮ ಆಗುತ್ತದೆ. ಸಂಪುಟ ಉಪಸಮಿತಿ, ಸಂಪುಟ ಸಭೆಯಲ್ಲಿ ಚರ್ಚಿಸಿದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಾನು ರುಕ್ಮಿಣಿ ವಸಂತ್ ಸ್ವಲ್ಪ ಹಣ ಬೇಕಿದೆ ಕಳುಹಿಸಿ; ಈ ರೀತಿ ಮೆಸೇಜ್ ನಿಮಗೂ ಬರಬಹುದು ಹುಷಾರ್!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.