Monday, November 2, 2026
spot_img
More
    spot_img
    HomeLatest newsಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ; ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ

    ಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ; ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ

    ಬೆಂಗಳೂರು: ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

    ಆರ್‌ಎಸ್‌ಎಸ್‌ ತನ್ನ 10ನೇ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಐಟ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

    ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿ 100 ವರ್ಷಗಳು. ಸ್ವಾತಂತ್ರ್ಯ ಚಳುವಳಿಗೆ ದ್ರೋಹ ಬಗೆದು 100 ವರ್ಷಗಳು. ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು. ರಾಷ್ಟ್ರ ವಿರೋಧಿಗಾಗಿ 100 ವರ್ಷಗಳು. ಭಾರತ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್‌ ಮುಖ್ಯ ಕಾರ್ಯದರ್ಶಿಗೆ ಫೆಬ್ರವರಿ.24, 1948ರಂದು ಬರೆದ ಪತ್ರ ಇಲ್ಲಿದೆ. ಇದರಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಹೇಗೆ ಅವಮಾನಿಸಿದೆ ಎಂಬುದನ್ನು ದಾಖಲಿಸಲಾಗಿದೆ.

    ಇತಿಹಾಸವು ನಮ್ಮ ದೇಶಕ್ಕೆ ಆರ್‌ಎಸ್‌ಎಸ್‌ ಮಾಡಿದ ನಿರ್ಲಕ್ಷ್ಯ ದ್ರೋಹದ ನಿದರ್ಶನಗಳಿಂದ ತುಂಬಿದೆ. ಇಡೀ ಬಿಜೆಪಿ ಇಕೋ ಸಿಸ್ಟಂ ಎಷ್ಟೇ ಪ್ರಯತ್ನಿಸಿದರೂ ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಎಂಬ ಇತಿಹಾಸವನ್ನು ಅಳಿಸಿಹಾಕಲು ಅವರಿಗೆ ಎಂದಿಗೂ ಸಾಧ್ಯವಾಗುವುದಿಲ್ಲ.

    ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್‌ ಚರಿತ್ರೆಯನ್ನು ತಿಳಿದುಕೊಳ್ಳುವ ಸಮಯ ಬಂದಿದೆ ಎಂದು ಟ್ವೀಟ್‌ ಮಾಡಿದ್ದಾರೆ.

    ₹67 ಲಕ್ಷದ ಹೋಮ್ ಲೋನ್‌ ಕೇವಲ 6 ವರ್ಷದಲ್ಲಿ ಕ್ಲಿಯರ್! ಟೆಕ್ಕಿಯ ‘ಟೆನ್ಶನ್-ಫ್ರೀ’ ಸಾಲಮುಕ್ತಿ ಸೂತ್ರ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search