Monday, November 2, 2026
spot_img
More
    spot_img
    HomeLatest newsತಿರುಮಲ ದೇವಾಲಯದ ಮೆಟ್ಟಿಲುಗಳ ಮೇಲೆ ಕುಳಿತು ಮಾಂಸಹಾರ ಸೇವಿಸಿ ಕೆಲಸ ಕಳೆದುಕೊಂಡ ದೇವಸ್ಥಾನದ ಸಿಬ್ಬಂದಿ; ವಿಡಿಯೊ

    ತಿರುಮಲ ದೇವಾಲಯದ ಮೆಟ್ಟಿಲುಗಳ ಮೇಲೆ ಕುಳಿತು ಮಾಂಸಹಾರ ಸೇವಿಸಿ ಕೆಲಸ ಕಳೆದುಕೊಂಡ ದೇವಸ್ಥಾನದ ಸಿಬ್ಬಂದಿ; ವಿಡಿಯೊ

    ತಿರುಪತಿ: ತಿರುಪತಿಯ ತಿರುಮಲ ದೇವಾಲಯದ ಕಾಲ್ನಡಿಗೆ ಮಾರ್ಗದ ಮೆಟ್ಟಿಲುಗಳ ಮೇಲೆ ಕುಳಿತು ದೇವಾಲಯದ ಇಬ್ಬರು ಸಿಬ್ಬಂದಿ ಕುಳಿತು ಮಾಂಸಹಾರ ಸೇವಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

    ದೇವಸ್ಥಾನಕ್ಕೆ ಆಗಮಿಸುತ್ತಿದ್ದ ಭಕ್ತರು ಇದನ್ನು ಗಮನಿಸಿ ತಮ್ಮ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿಕೊಂಡು ಮಾಂಸ ಸೇವಿಸುತ್ತಿದ್ದ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.

    ಹೀಗೆ ಭಕ್ತರು ಮಾಂಸಹಾರ ಸೇವಿಸುತ್ತಿದ್ದೀರ ಎಂದು ಪ್ರಶ್ನಿಸಿದ ಕೂಡಲೇ ಆಹಾರ ಸೇವಿಸುತ್ತಿದ್ದವರು ತಲೆತಗ್ಗಿಸಿ ತಮ್ಮ ಆಹಾರ ಸೇವನೆಯನ್ನು ಮುಂದುವರಿಸಿದ್ದಾರೆ. ಮಾಂಸಹಾರ ಸೇವನೆ ಮಾಡುತ್ತಿರುವುದನ್ನು ವಿರೋಧಿಸಿದ ಬಳಿಕ ವಿಡಿಯೊ ಮಾಡಿಕೊಂಡಿದ್ದೇವೆ, ಇದರ ಕುರಿತು ದೂರನ್ನೂ ಸಹ ನೀಡುತ್ತೇವೆ ಎಂದು ಭಕ್ತಾದಿಗಳು ಹೇಳಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಈ ವಿಡಿಯೊ ವೈರಲ್‌ ಅದ ಬೆನ್ನಲ್ಲೇ ಟಿಟಿಡಿ ಈ ಕುರಿತು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ಮಾಂಸಹಾರ ಸೇವಿಸುತ್ತಿದ್ದ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಗಳಾದ ರಾಮಸ್ವಾಮಿ ಮತ್ತು ಸರಸಮ್ಮ ವಿರುದ್ಧ ಕಠಿಣ ಕ್ರಮ ಜರುಗಿಸಲಾಗಿದೆ. ತಿರುಮಲ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದ್ದು, ಇಬ್ಬರನ್ನೂ ಸೇವೆಯಿಂದ ತೆರವುಗೊಳಿಸಲಾಗಿದೆ ಎಂದು ಬರೆದುಕೊಂಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search