Tuesday, November 3, 2026
spot_img
More
    spot_img
    HomeLatest newsರಾಜ್ಯಾದ್ಯಂತ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು

    ರಾಜ್ಯಾದ್ಯಂತ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು

    ಬೆಂಗಳೂರು: ರಾಜ್ಯದ ಹಲವಾರು ಇಲಾಖೆಯ ಸರ್ಕಾರಿ ಅಧಿಕಾರಿಗಳ ಆದಾಯದ ಮೂಲ ಅಸಮಾನವಾಗಿದೆ ಎಂದು ರಾಜ್ಯಾದ್ಯಂತ ಇಂದು ಲೋಕಾಯುಕ್ತ ದಾಳಿ ನಡೆದಿದೆ.

    ಬೇನಾಮಿ ಆಸ್ತಿ, ಆದಾಯಕ್ಕಿಂತ ಹೆಚ್ಚು ಸಂಪನ್ಮೂಲ ಮತ್ತು ಭ್ರಷ್ಟಾಚಾರ ಆರೋಪಗಳು ಬೆಳಕಿಗೆ ಬಂದ ಕಾರಣ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳ ಮನೆ, ಗೆಸ್ಟ್‌ಹೌಸ್‌ ಮತ್ತು ಇತರ ಖಾಸಗಿ ಸ್ವತ್ತಿನ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ರಾಯಚೂರು, ಗದಗ, ಕೊಪ್ಪಳ ಚಿತ್ರದುರ್ಗದಲ್ಲಿ ದಾಳಿ ನಡೆದಿದೆ.

    ಬೆಂಗಳೂರಿನ ಈಸ್ಟ್‌ ಸರ್ಕಲ್‌ ಬೆಸ್ಕಾಂನ ಸೂಪರಿಂಟೆಂಡೆಂಟ್‌ ಎಲೆಕ್ಟ್ರಿಕಲ್‌ ಎಂಜಿನಿಯರ್‌ ಲೋಕೇಶ್‌ ಬಾಬು, ಬಿಬಿಎಂಪಿ ವಸಂತಪುರ ವಾರ್ಡ್‌ ಸಂಖ್ಯೆ 197ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿಯ ಯಲಹಂಕ ವಲಯದ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ.ಸುನೀಲ್‌ ಕುಮಾರ್‌ ಅವರ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

    ಇನ್ನು ಕಲಬುರಗಿ ಮಹಾನಗರ ಪಾಲಿಕೆ ಉಪಆಯುಕ್ತ ಆರ್‌.ಪಿ. ಜಾಧವ್ ಮನೆ, ಫಾರ್ಮ್‌ಹೌಸ್‌ ಮೇಲೂ ದಾಳಿ ನಡೆದಿದೆ. ಕೊಪ್ಪಳದ ಅಬಕಾರಿ ನಿರೀಕ್ಷಕ ರಮೇಶ ಅಂಗಡಿ ಮನೆ ಮೇಲೂ ದಾಳಿ ನಡೆಸಲಾಗಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search