Monday, November 2, 2026
spot_img
More
    spot_img
    HomeTop Storyಬಾಯಲ್ಲಿ ಬಸವಣ್ಣನ ವಚನ, ಕೈಯಲ್ಲಿ ಲಾಠಿ ಪ್ರಹಾರ; ಕಾಂಗ್ರೆಸ್‌ ವಿರುದ್ಧ ಅಶೋಕ್‌ ಕಿಡಿ

    ಬಾಯಲ್ಲಿ ಬಸವಣ್ಣನ ವಚನ, ಕೈಯಲ್ಲಿ ಲಾಠಿ ಪ್ರಹಾರ; ಕಾಂಗ್ರೆಸ್‌ ವಿರುದ್ಧ ಅಶೋಕ್‌ ಕಿಡಿ

    ಪಂಚಮಸಾಲಿ ಹೋರಾಟಗಾರರ ಮೇಲೆ ಬೆಳಗಾವಿಯಲ್ಲಿ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್‌ ಮಾಡಿರುವುದು ಅತ್ಯಂತ ಖಂಡನೀಯವಾಗಿದ್ದು ಕಾಂಗ್ರೆಸ್ ಸರ್ಕಾರ ತನ್ನ ಹಿಟ್ಲರ್ ಧೋರಣೆ ಮೂಲಕ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರ್‌ ಅಶೋಕ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಸಿಎಂ ಸಿದ್ದರಾಮಯ್ಯನವರೇ, ತಮ್ಮ ಹಿಟ್ಲರ್ ಆಡಳಿತದಲ್ಲಿ ರಾಜ್ಯದ ಜನತೆ ತಮ್ಮ ಹಕ್ಕುಗಳಿಗಾಗಿ ಶಾಂತಿಯುತ ಪ್ರತಿಭಟನೆ ಮಾಡಲೂ ಅವಕಾಶವಿಲ್ಲವೇ? ಬಾಯಲ್ಲಿ ಬಸವಣ್ಣನ ವಚನ ಹೇಳಿ ಕೈಯಲ್ಲಿ ಲಾಠಿ ಪ್ರಹಾರ ಮಾಡುವ ತಮ್ಮದು ಯಾವ ಸೀಮೆ ಸಿದ್ಧಾಂತ ಸ್ವಾಮಿ? ಎಂದು ಪ್ರಶ್ನಿಸಿದ್ದಾರೆ.

    ಪ್ರತಿಭಟನಾಕಾರರಿಗೆ ರಕ್ತ ಬರುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದಾರಲ್ಲ, ಪೊಲೀಸರು ಯಾರ ಅಣತಿಯಂತೆ ಈ ದುಸ್ಸಾಹಸ ಮಾಡಿದ್ದಾರೆ? ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಜನರ ಹಕ್ಕು. ಜನರ ಸಮಸ್ಯೆ ಆಲಿಸಿ ಅವರಿಗೆ ಸಮಾಧಾನ ಹೇಳಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿರುವುದು ಸರ್ಕಾರದ ಕರ್ತವ್ಯ. ಈ ರೀತಿ ಮುತ್ಸದ್ಧಿತನ ತೋರುವುದು ಬಿಟ್ಟು, ಏಕಾಏಕಿ ಲಾಠಿ ಚಾರ್ಚ್ ಮಾಡುವ ಮೂಲಕ ಒಂದು ಸಮುದಾಯವನ್ನು ಪ್ರಚೋದನೆ ಮಾಡಿ ರೊಚ್ಚಿಗೇಳಿಸುವುದು ಯಾವ ಸೀಮೆ ಆಡಳಿತ? ಯಾವ ಸೀಮೆ ನಾಯಕತ್ವ? ಪ್ರತಿಭಟನಾಕಾರರನ್ನ ಕರೆಸಿ ಮಾತನಾಡಿ. ಅವರ ಮೀಸಲಾತಿ ಬೇಡಿಕೆ ಬಗ್ಗೆ ತಮ್ಮ ನೀಲಿವೇನು ಎನ್ನುವುದನ್ನ ಸ್ಪಷ್ಟ ಪಡಿಸಿ. ಪರಿಸ್ಥಿತಿ ಕೈಮೀರಿಹೋಗುವ ಮುನ್ನ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಕಿಡಿಕಾರಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search