Tuesday, September 1, 2026
spot_img
More
    spot_img
    HomeLatest newsಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

    ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, ಇಂದು ಮುಂಜಾನೆ ವಿಧಿವಶರಾಗಿರುವ ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

    Advertisement

    ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಸೂಚಿಸಿ ಕಲಾಪ ಮುಗಿದ ನಂತರ ಬೆಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ಸದಾಶಿವನಗರದಲ್ಲಿರುವ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಜೊತೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್‌ ಸಹ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

    ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಸ್‌.ಎಂ.ಕೃಷ್ಣ ಅವರ ರಾಜಕೀಯ ಬದುಕೇ ಒಂದು ಹೋರಾಟದ ರೀತಿ ಇದೆ. ರಾಜಕೀಯದಲ್ಲಿ 6 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ವೇಳೆ ಕರ್ನಾಟಕ ರಾಜ್ಯ ಅಭಿವೃದ್ದಿ ಕಂಡಿದೆ.

    ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡುವಲ್ಲಿ ಇವರ ಕೊಡುಗೆ ಅಪಾರವಾಗಿದೆ. ಇವರಿಗೆ ಮೈಸೂರು ಜಿಲ್ಲೆಯೆಂದರೆ ತುಂಬಾ ಇಷ್ಟ. ಏಕೆಂದರೆ ಇವರ ಯೌವ್ವನದ ಬಹಳಷ್ಟು ದಿನಗಳನ್ನು ಮೈಸೂರಿನಲ್ಲೇ ಕಳೆದಿದ್ದಾರೆ. ಇವರ ಆರಂಭಿಕ ವಿದ್ಯಾಭ್ಯಾಸವು ಇಲ್ಲಿಂದಲೇ ಶುರುವಾಯಿತು ಎಂದು ಕೃಷ್ಣ ಅವರ ಬಾಲ್ಯಜೀವನವನ್ನು ಮೆಲುಕು ಹಾಕಿದರು.

    ಎಸ್‌.ಎಂ.ಕೃಷ್ಣ ಅವರು, ಸಿಎಂ ಆಗಿ, ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್‌ ಕುಮಾರ್‌ ಅಪಹರಣ, ಕಾವೇರಿ ವಿವಾದ ಅನೇಕ ಸಮಸ್ಯೆಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading