Tuesday, September 1, 2026
spot_img
More
    spot_img
    HomeLatest newsನಾಳೆ ಹುಟ್ಟೂರಿನಲ್ಲಿ ಎಸ್‌ಎಂ ಕೃಷ್ಣ ಅಂತ್ಯಕ್ರಿಯೆ

    ನಾಳೆ ಹುಟ್ಟೂರಿನಲ್ಲಿ ಎಸ್‌ಎಂ ಕೃಷ್ಣ ಅಂತ್ಯಕ್ರಿಯೆ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯು ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ.

    Advertisement

    ಎಸ್.ಎಂ.ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅವರ ಪಿತ್ರಾರ್ಜಿತ ಆಸ್ತಿಯ ಕೆಫೆ ಕಾಫಿ ಡೇ ಪಕ್ಕದಲ್ಲಿ ನಡೆಯಲಿದೆ.

    ಸಮೀಪದ ಜಮೀನಿನಲ್ಲಿ ನಡೆಯಲಿರುವ ಅಂತ್ಯಕ್ರಿಯೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಂಡ್ಯ ಜಿಲ್ಲೆ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕ ಉದಯ್ ಸೇರಿದಂತೆ ಹಲವಾರು ಮಂದಿ ಸ್ಥಳಕ್ಕೆ ತೆರಳಿ ಪೂರ್ವ ಸಿದ್ಧತೆಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

    ಜಿಲ್ಲಾಡಳಿತ ಕೂಡ ಅಗತ್ಯ ಸಿದ್ಧತೆಗಳಿಗೆ ತಯಾರಿ ಆರಂಭಿಸಿದೆ. ಮಂಡ್ಯ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ತೆರಳಿದ್ದು, ವಿಶೇಷ ಅತಿಥಿಗಳ ಆಗಮನ ಹಾಗೂ ಆಸನ ವ್ಯವಸ್ಥೆ, ಪಾರ್ಕಿಂಗ್, ಭದ್ರತೆ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

    ನಾಳೆ ಬೆಳಿಗ್ಗೆ ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರ ಬೆಂಗಳೂರಿನಿಂದ ಮದ್ದೂರಿನವರೆಗೂ ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಲಿದೆ. ನಂತರ ಸೋಮನಹಳ್ಳಿಯಲ್ಲಿ ಸಂಜೆ ೪ ಗಂಟೆಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ನಿರ್ಧರಿಸಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading