ಮಾಜಿ ಸಿಎಂ ಎಸ್‌ಎಂ ಕೃಷ್ಣ ವಿಧಿವಶರಾಗಿದ್ದು, ರಾಜ್ಯ ಹಾಗೂ ರಾಷ್ಟ್ರೀಯ ರಾಜಕಾರಣಿಗಳು ಹಿರಿಯ ನಾಯಕನ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇನ್ನು ಕೃಷ್ಣ ಅವರ ನೆಚ್ಚಿನ ಕಾಫಿ ಡೇ ಹತ್ತಿರದ ಜಾಗದಲ್ಲೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.
ಅಂತಿಮ ವಿಧಿ-ವಿಧಾನಗಳು ಹಾಗೂ ಶವಸಂಸ್ಕಾರ ಕಾರ್ಯವು ಕುಟುಂಬಸ್ಥರ ನಿರ್ಧಾರದ ಮೇರೆಗೆ, ಇವರಿಗೆ ತುಂಬಾ ಪ್ರಿಯವಾದ “ಮದ್ದೂರು ತಾಲ್ಲೂಕು ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ” ಹತ್ತಿದ ಖಾಲಿ ಜಾಗದಲ್ಲಿ ಹಿಂದೂ ಸಂಪ್ರದಾಯದಂತೆ ಅಂತಿಮ ದರ್ಶನ ಹಾಗೂ ಅಂತಿಮ ವಿಧಿ-ವಿಧಾನಗಳ ಕಾರ್ಯಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವ ಸಲುವಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಆಜ್ಞೆಯ ಮೇರೆಗೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಜೊತೆ ಸ್ಥಳದಲ್ಲಿ ವಾಸ್ತವ ಹೂಡಿ ಸಂಪೂರ್ಣ ಜವಾಬ್ದಾರಿಯಿಂದ ಸಕಲ ಸಿದ್ಧತೆಯ ನೇತೃತ್ವ ವಹಿಸಿಕೊಂಡು, ಅಂತಿಮ ದರ್ಶನಕ್ಕೆ ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಕಲ ಸಿದ್ಧತೆಗಳ ಜೊತೆಗೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


