Tuesday, September 1, 2026
spot_img
More
    spot_img
    HomeTop Storyಎಸ್‌ಎಂ ಕೃಷ್ಣ ಅವರಿಗೆ ಸಲ್ಲುತ್ತೆ ಬೆಂಗಳೂರನ್ನು ಐಟಿಬಿಟಿ ನಗರಿ ಮಾಡಿದ ಕೀರ್ತಿ

    ಎಸ್‌ಎಂ ಕೃಷ್ಣ ಅವರಿಗೆ ಸಲ್ಲುತ್ತೆ ಬೆಂಗಳೂರನ್ನು ಐಟಿಬಿಟಿ ನಗರಿ ಮಾಡಿದ ಕೀರ್ತಿ

    ಬೆಂಗಳೂರು- ರಾಜಧಾನಿ ಬೆಂಗಳೂರಿನತ್ತ ವಿಶ್ವವೇ ತಿರುಗಿನೋಡುವಂತೆ ಮಾಡಿದ, ಐಟಿಬಿಟಿ ನಗರಿಯನ್ನಾಗಿ ಮಾಡಿ ಕರ್ನಾಟಕದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆಯಾಗಿ ನೀಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು ಎಸ್.ಎಂ. ಕೃಷ್ಣ ಅವರು.

    Advertisement

    ಹೈಟೆಕ್ ಮುಖ್ಯಮಂತ್ರಿ ಎಂದೇ ಹೆಸರಾಗಿದ್ದ ಎಂ ಕೃಷ್ಣ ಅವರು ಬೆಂಗಳೂರಿಗೆ ಸಿಲಿಕಾನ್ ಸಿಟಿ ಎಂದು ಹೆಸರು ಬರಲು ಕಾರಣರಾಗಿದ್ದರು. ಈ ಮೂಲಕ ಜಾಗತಿಕ ಭೂಪಟದಲ್ಲಿ ಬೆಂಗಳೂರಿನ ಹೆಸರು ಕಾಣಿಸಿಕೊಳ್ಳುವಂತೆ ಮಾಡಿದ್ದರು.

    ೧೯೮೩ರಲ್ಲಿ ಕೇಂದ್ರ ಕೈಗಾರಿಕಾ ಸಚಿವರಾಗಿದ್ದ ಅವರು ಕೈಗಾರಿಕೆಗಳ ಏಳ್ಗೆ ಬಗ್ಗೆ ಸಾಕಷ್ಟು ಶ್ರಮ ವಹಿಸಿದ್ದರು. ದೇಶದ ಪ್ರತಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕೈಗಾರಿಕಾ ಬಡಾವಣೆಗಳ ಸ್ಥಾಪನೆಗೆ ಮುಂದಾದರು. ಇದರ ಫಲವನ್ನು ಬಿಹಾರ, ಒರಿಸ್ಸಾ ಸೇರಿದಂತೆ ಹಲವು ರಾಜ್ಯಗಳು ಪಡೆದುಕೊಂಡವು.

    ೧೯೯೯ರಿಂದ ೨೦೦೪ ಕೃಷ್ಣ ರವರು ಮುಖ್ಯಮಂತ್ರಿಯಾಗಿ ನಾಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಅವರ ಕಾಲಘಟ್ಟದಲ್ಲಿ ಕೈಗೊಂಡ ಅಭಿವೃದ್ಧಿ ರ‍್ಯಗಳು ಯೋಜನೆಗಳು ಇಂದಿಗೂ ಜಾರಿಯಲ್ಲಿದ್ದು, ಅದು ಕೃಷ್ಣ ರವರ ದೂರದೃಷ್ಟಿಯ ಫಲವಾದದ್ದು. ಸ್ತ್ರೀ ಶಕ್ತಿ, ಅಕ್ಷರ ದಾಸೋಹ, ರೈತರಿಗೆ ಪಹಣಿ ನೀಡುವ ಭೂಮಿ ಯೋಜನೆ, ಯಶಸ್ವಿನಿ ಯೋಜನೆ ಸಮಾಜದ ಸರ್ವ ಜನರನ್ನು ಜನಮನ ಗೆದ್ದ ಯೋಜನೆಗಳಾಗಿವೆ.

    ಬೆಂಗಳೂರು ಸಿಂಗಾಪುರದಂತೆ ಆಗಬೇಕು ಎಂದು ಕನಸು ಕಂಡಿದ್ದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು, ತಾವು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಐಟಿ ಕ್ಷೇತ್ರಕ್ಕೆ ಇನ್ನಿಲ್ಲದಷ್ಟು ಅವಕಾಶಗಳನ್ನು ಸೃಷ್ಟಿಸಿದ್ದರು. ಇದರಿಂದ ಉದ್ಯಾನ ನಗರಿಯು ಐಟಿ ಸಿಟಿಯಾಗಿ ಮಾರ್ಪಟ್ಟಿದ್ದಲ್ಲದೆ ‘ಭಾರತದ ಸಿಲಿಕಾನ್ ವ್ಯಾಲಿ’ಯಾಗಿ ಬೆಳೆಯಲು ಸಾಧ್ಯವಾಯಿತು.

    ಅವರ ಮುಖ್ಯಮಂತ್ರಿಯಾಗಿದ್ದಾಗಲೇ ವಿಕಾಸ ಸೌಧ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಕ್ಕೆ ಶ್ರಮಿಸಿದ್ದರು, ಬೆಂಗಳೂರಿಗೆ ಮೆಟ್ರೋ ತರುವಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಇದು ಅವರು.

    ಐಟಿ ಬಿಟಿ ಕ್ಷೇತ್ರಕ್ಕೆ ಅಗಾದವಾದ ಬೆಂಬಲ ನೀಡಿ ಬೆಂಗಳೂರು ನಗರದ ಬೆಳವಣಿಗೆಗೆ ಹಾಕಿಕೊಟ್ಟ ಭದ್ರ ಬುನಾದಿಯಿಂದ ಜಾಗತಿಕ ಮಟ್ಟದಲ್ಲಿ ಬೆಂಗಳೂರು ಸಿಲಿಕಾನ್ ವ್ಯಾಲಿ ಎಂದು ಹೆಸರು ಗಳಿಸಿ ಅಮೆರಿಕದ ಕ್ಯಾಲಿರ‍್ನಿಯ ನಗರಕ್ಕೆ ರ‍್ಯಾಯವಾಗಿ ಹೆಸರು ಗಳಿಸಿತ್ತು. ಇಂದು ರಾಜ್ಯದ ಆಯವ್ಯಯ ಮೂರು ಲಕ್ಷ ಕೋಟಿ ದಾಟಿದ್ದರೆ ಅದಕ್ಕೆ ಕಾರಣ ಕೃಷ್ಣ ರವರು ಐಟಿ ಕ್ಷೇತ್ರಕ್ಕೆ ನೀಡಿದ ಅವಕಾಶಗಳೇ ಕಾರಣ. ಲಕ್ಷಾಂತರ ಉದ್ಯೋಗ ಸೃಷ್ಟಿಸಿ ಹಲವು ಮೂಲಭೂತ ಸರ‍್ಯಗಳನ್ನು ನೀಡಿ ಕನ್ನಡ ನಾಡನ್ನು ವಿಶ್ವ ಭೂಪಟದಲಿ ಬೆಳಗಿಸಲು ಕೃಷ್ಣ ರವರ ಪಾತ್ರ ಅತ್ಯಂತ ಹಿರಿದಾದ್ದು.

    ಎಸ್.ಎಂ. ಕೃಷ್ಣಾ ಅವರು ೨೦೦೯ ರಿಂದ ೨೦೧೨ ರವರೆಗೆ ಮನಮೋಹನ ಸಿಂಗ್ ಸರ್ಕಾರದಲ್ಲಿ ಭಾರತದ ೭೨ನೇ ವಿದೇಶಾಂಗ ಸಚಿವರಾಗಿದ್ದರು. ಆ ಸರ್ಕಾರದಲ್ಲಿ ಸುಮಾರು ೮೦ಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದರು. ಅಲ್ಲದೆ, ಪಾಕಿಸ್ತಾನ, ಚೀನಾ, ಬ್ರಿಟನ್, ರಷ್ಯಾ, ದಕ್ಷಿಣ ಆಫ್ರಿಕಾ ದೇಶಗಳ ಜತೆ ಉತ್ತಮ ಸರ‍್ಕವನ್ನು ಇಟ್ಟುಕೊಂಡಿದ್ದರು. ಇದೆಲ್ಲದರ ಜತೆಗೆ ಅಮೆರಿಕದ ಆಗಿನ ವಿದೇಶಾಂಗ ಸಚಿವೆ ಹಿಲರಿ ಕ್ಲಿಂಟನ್ ಜತೆ ಸಹ ರಾಜತಾಂತ್ರಿಕ ಬಾಂಧವ್ಯವನ್ನು ಉತ್ತಮವಾಗಿಟ್ಟುಕೊಂಡಿದ್ದರು. ಇದಲ್ಲದೆ, ದ್ವಿಪಕ್ಷೀಯ ಸಂಬಂಧ ಸೇರಿದಂತೆ ಜಾಗತಿಕ ವಿಷಯವಾಗಿ ಹಲವು ರಾಷ್ಟ್ರಗಳೊಂದಿಗೆ ನಿರಂತರ ಸರ‍್ಕದಲ್ಲಿದ್ದು, ತಮ್ಮ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಾಹಣೆ ಮಾಡಿದ್ದರು.

    ವಿಶ್ವಸಂಸ್ಥೆಯಲ್ಲಿ ಭಾರತದ ನಿಲುವನ್ನು ರ‍್ಥವಾಗಿ ಪ್ರತಿಪಾದಿಸಿದ್ದ ಎಸ್.ಎಂ. ಕೃಷ್ಣ ಅವರು, ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಬೇಕು ಎಂದು ಒತ್ತಾಯಿಸಿದ್ದರು. ಈ ಮೂಲಕ ಭಾರತ ಸಹ ಎಲ್ಲ ದೇಶಗಳಂತೆ ರ‍್ಥವಾದ ದೇಶ ಹಾಗೂ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಪಡೆದುಕೊಳ್ಳುವ ಎಲ್ಲ ರ‍್ಹತೆ ಇದೆ ಎಂದು ಪ್ರತಿಪಾದಿಸಿದ್ದರು. ಇನ್ನು ಶತ್ರು ದೇಶ ಎಂದೇ ಕರೆಯಲ್ಪಡುವ ಪಾಕಿಸ್ತಾನದ ಜತೆ ಬಾಂಧವ್ಯ ವೃದ್ಧಿಗಾಗಿ ಎಸ್.ಎಂ ಕೆ ಅವರು ಸಾಕಷ್ಟು ಪ್ರಯತ್ನಪಟ್ಟಿದ್ದರು. ಇನ್ನು ಚೀನಾದ ಜತೆಯೂ ಉತ್ತಮ ಸಂಬಂಧ ಹೊಂದಲು ಆದ್ಯತೆಯ ಹೆಜ್ಜೆಯನ್ನಿಟ್ಟಿದ್ದರು.

    ಈಗ ನಾವು ಪಾಸ್ ಪೋರ್ಟ್ ಅನ್ನು ಬಹಳ ಸುಲಭವಾಗಿ ಹಾಗೂ ಸರಳವಾಗಿ ಪಡೆದುಕೊಂಡು ಬಿಡುತ್ತೇವೆ. ಆದರೆ, ಆಗ ಪಾಸ್‌ಪೋರ್ಟ್ ್ಟ ಪಡೆದುಕೊಳ್ಳುವ ಪ್ರಕ್ರಿಯೆ ಅಷ್ಟು ಸರಳವಾಗಿರಲಿಲ್ಲ. ಇದಕ್ಕಾಗಿ ಸಾಕಷ್ಟು ಪ್ರಕ್ರಿಯೆಗಳಿದ್ದವು. ಇವುಗಳನ್ನು ಪೂರೈಸುವಷ್ಟರಲ್ಲಿ ಜನರು ಹೈರಾಣಾಗಿಬಿಡುತ್ತಿದ್ದರು. ಈ ಸಮಸ್ಯೆ ಅವರ ಗಮನಕ್ಕೆ ಬಂದಿತ್ತು.

    ಈ ಕಾರಣಕ್ಕಾಗಿಯೇ ಅವರು ಪಾಸ್ ಪೋರ್ಟ್ ನೀತಿಯನ್ನು ಸರಳೀಕರಣಗೊಳಿಸಲು ಮುಂದಾದರು. ಜತೆಗೆ ಆಧುನೀಕರಣಗೊಳಿಸಿದರು. ಹೀಗಾಗಿ ದೇಶದ ವಿವಿಧ ಕಡೆ ೭೭ ಪಾಸ್‌ರ‍್ಟ್ ಸೇವಾ ಕೇಂದ್ರಗಳನ್ನು ತೆರೆದರು. ಇನ್ನು ಪಾಸ್‌ರ‍್ಟ್ ನೀಡಿಕೆಯಲ್ಲಿ ಸಾಕಷ್ಟು ವಿಳಂಬವಾಗುತ್ತಿದ್ದ ದೂರಿಗೆ ಪರಿಹಾರವನ್ನು ಕಂಡುಕೊಳ್ಳಲು ಇನ್ಸುರ‍್ನೆನ್ಸ್ ಕಾರ‍್ಯಕ್ರಮವನ್ನು ಜಾರಿಗೆ ತಂದರು. ಇದರ ಮೂಲಕ ಪಾಸ್ ಪೋರ್ಸ್ ನೀಡಿಕೆಗೆ ವ್ಯವಸ್ಥೆ ಮಾಡಿದರು. ಇದು ಕೋಟ್ಯಂತರ ಭಾರತೀಯರಿಗೆ ಅನುಕೂಲವಾಯಿತು. ಸಕಾಲದಲ್ಲಿ ಅಗತ್ಯವಿದ್ದವರು ಪಾಸ್‌ರ‍್ಟ್ಗಳನ್ನು ಪಡೆದುಕೊಳ್ಳುವಂತಾಯಿತು. ಇದರ ಸಂಪೂರ್ಣ ಕೀರ್ತಿ ಎಸ್‌ಎಂಕೆ ಅವರಿಗೆ ಸಲ್ಲಬೇಕು.

    ಅವರ ಕಾರ್ಯ ತತ್ಪರತೆ ಬಗ್ಗೆ ತಿಳಿಸಲೇಬೇಕು. ೨೦೧೧ರಲ್ಲಿ ಲಿಬಿಯಾ ಕ್ರಾಂತಿ ಪ್ರಾರಂಭವಾಗಿತ್ತು. ಇದರಿಂದ ಅಲ್ಲಿದ್ದ ಸರಿಸುಮಾರು ೧೮ ಸಾವಿರ ಭಾರತೀಯರ ಜೀವ-ಜೀವನ ಸಂಕಷ್ಟಕ್ಕೆ ಸಿಲುಕಿತ್ತು. ಆಗ, ಅವರೆಲ್ಲರನ್ನೂ ಸುರಕ್ಷಿತವಾಗಿ ಭಾರತಕ್ಕೆ ಕರೆತರುವಲ್ಲಿ ಎಸ್‌ಎಂಕೆ ಮಹತ್ವದ ಪಾತ್ರವನ್ನು ವಹಿಸಿದ್ದರು. ನಿರಂತರ ಸುರಕ್ಷತೆಗೆ ಬಹಳವೇ ಆದ್ಯತೆಯನ್ನು ನೀಡಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading