Tuesday, November 3, 2026
spot_img
More
    spot_img
    HomeTop Storyಹಿರಿಯ ಸಾಹಿತಿ ದೇವನೂರು ಮಹಾದೇವರಿಗೆ ತಮಿಳುನಾಡು ಸರ್ಕಾರದಿಂದ ವೈಕಂ ಪ್ರಶಸ್ತಿ ಘೋಷಣೆ

    ಹಿರಿಯ ಸಾಹಿತಿ ದೇವನೂರು ಮಹಾದೇವರಿಗೆ ತಮಿಳುನಾಡು ಸರ್ಕಾರದಿಂದ ವೈಕಂ ಪ್ರಶಸ್ತಿ ಘೋಷಣೆ

    ಮೈಸೂರು: ಹಿರಿಯ ಸಾಹಿತಿ, ಬಂಡಾಯಗಾರ ಹಾಗೂ ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ದೇವನೂರು ಮಹದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಣೆ ಮಾಡಿದೆ.

    ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಏಳಿಗೆಗಾಗಿ, ಅವರ ಕಲ್ಯಾಣಕ್ಕಾಗಿ ದುಡಿಯುವ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ವರ್ಷ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ವೈಕಂ ಸತ್ಯಾಗ್ರಹ ಶತಮಾನೋತ್ಸವ ಸಂದರ್ಭದಲ್ಲಿ ಈ ಬಗ್ಗೆ ಘೋಷಿಸಿದ್ದರು.

    ತಮಿಳುನಾಡಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಹೆಚ್ಚು ದೇವಾಲಯಗಳಿದ್ದು, ಜಾತಿ ವ್ಯವಸ್ಥೆಯ ದಬ್ಬಾಳಿಕೆಗೆ ಹೆಸರುವಾಸಿಯಾಗಿತ್ತು. ಇದರ ವಿರುದ್ಧ ಹಲವಾರು ನಾಯಕರು ಹೋರಾಟ ಮಾಡಿ ಅಶ್ಪೃಶ್ಯರ ಪ್ರವೇಶಾತಿಗಾಗಿ ಒತ್ತಾಯಿಸಿದ್ದರು. ಈ ಕಾರಣದಿಂದ ವೈಕಂ ಪ್ರಶಸ್ತಿಯನ್ನು ನೀಡಲಾಗುತ್ತದೆ.

    ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಚೆಕ್‌ ಮತ್ತು ಪದಕವನ್ನು ಒಳಗೊಂಡಿರುತ್ತದೆ. ಹಾಗೆಯೇ ಐದು ಲಕ್ಷ ರೂಪಾಯಿ ನಗದು ಪ್ರಶಸ್ತಿ ಪುರಸ್ಕೃತರಿಗೆ ಲಭಿಸಲಿದೆ.

    ದೇವನೂರು ಮಹಾದೇವ ಅವರು, ಕುಸುಮ ಬಾಲೆ, ಎದೆಗೆ ಬಿದ್ದ ಅಕ್ಷರ, ಆರ್‌ಎಸ್‌ಎಸ್‌ ಆಳ ಮತ್ತು ಅಗಲ, ಒಡಲಾಳ ಪುಸ್ತಕಗಳನ್ನು ಬರೆದಿದ್ದಾರೆ. ಕುಸುಮ ಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ, ಪದ್ಮಶ್ರೀ ಪ್ರಶಸ್ತಿಗಳು ಲಭಿಸಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search