Tuesday, September 1, 2026
spot_img
More
    spot_img
    HomeTop Storyಸಿಎಂ ಸಿದ್ದರಾಮಯ್ಯ ಮೇಲೆ ಅನುಮಾನ ವ್ಯಕ್ತಪಡಿಸಿದ ಜಯಮೃತ್ಯುಂಜಯ ಸ್ವಾಮೀಜಿ

    ಸಿಎಂ ಸಿದ್ದರಾಮಯ್ಯ ಮೇಲೆ ಅನುಮಾನ ವ್ಯಕ್ತಪಡಿಸಿದ ಜಯಮೃತ್ಯುಂಜಯ ಸ್ವಾಮೀಜಿ

    ಬೆಳಗಾವಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

    Advertisement

    ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

    ಘಟನೆಯಲ್ಲಿ 12 ಮಂದಿ ಪೊಲೀಸರು ಹಾಗೂ 6 ಮಂದಿ ಹೋರಾಟಗಾರರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಬೆಳಗಾವಿ ಬಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು, 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಪಂಚಮಸಾಲಿ ಹೋರಾಟ ಶಾಂತಿಯುತವಾಗಿತ್ತು. ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಬರಬೇಕು ಎಂದು ಆಗ್ರಹ ಇತ್ತು. ಆದ್ರೆ ಸ್ಥಳಕ್ಕೆ ಬಂದ ಸಚಿವರ ಮಾತು ಸಮಾಧಾನ ತರಲಿಲ್ಲ. ಹಾಗಾಗಿ ನಾವು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದೆವು. ಆದ್ರೆ ಅಲ್ಲಿದ್ದ ಪೊಲೀಸರು ಲಾಠಿ ಚಾರ್ಜ್‌ ಮಾಡಿದರು. ಲಾಠಿ ಚಾರ್ಜ್‌ನಿಂದ ಬಹಳಷ್ಟು ಜನರ ಕೈಕಾಲು ಮುರಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading