Thursday, September 24, 2026
spot_img
More
    spot_img
    HomeLatest newsನಾಯಕತ್ವ ಬದಲಾವಣೆ ಚರ್ಚೆಗೆ ಫುಲ್ ಸ್ಟಾಪ್ ಹಾಕಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

    ನಾಯಕತ್ವ ಬದಲಾವಣೆ ಚರ್ಚೆಗೆ ಫುಲ್ ಸ್ಟಾಪ್ ಹಾಕಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!

    ನಾಯಕತ್ವ ಬದಲಾವಣೆ ಚರ್ಚೆ ಬೆಳಗಾವಿಗೆ ತಲುಪಿತ್ತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ವಿಧಾನಸೌಧದ ಮೊಗಸಾಲೆಯಲ್ಲಿ ಈ ಚರ್ಚೆಗಳು ನಡೆದಿದ್ದವು.

    ಡಿಸೆಂಬರ್ 8ರ ಸೋಮವಾರದಿಂದ 19ರ ತನಕ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದೆ. ಅಧಿವೇಶನದ ನಡುವೆಯೇ ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯೂ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಲ್‌ಪಿ ಸಭೆಯಲ್ಲಿ ಪಾಲ್ಗೊಂಡಿದ್ದರು.

    ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹಾಗೂ ಶಾಸಕರು ಪಾಲ್ಗೊಂಡಿದ್ದರು. ಚಳಿಗಾಲದ ಅಧಿವೇಶನ ಸೇರಿದಂತೆ ವಿವಿಧ ವಿಚಾರದ ಕುರಿತು ಸಭೆಯಲ್ಲಿ ಚರ್ಚೆಗಳು ನಡೆದಿವೆ.

    ಅದರಲ್ಲೂ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಪ್ರಾರಂಭವಾಗಿ, ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು ಮುಗಿದ ಬಳಿಕ ಮೊದಲ ಬಾರಿಗೆ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಕುತೂಹಲಕ್ಕೆ ಕಾರಣವಾಗಿತ್ತು. ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳಿಗೆ ಈ ಸಭೆಯ ಬಳಿಕ ಪೂರ್ಣ ವಿರಾಮ ಬೀಳುವ ನಿರೀಕ್ಷೆ ಇತ್ತು.

    ಅನುದಾನಕ್ಕಾಗಿ ಬೇಡಿಕೆ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಮುಖ್ಯಮಂತ್ರಿಗಳ ಮುಂದೆ ಅನುದಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ನಾವು ಕೇವಲ ಗ್ಯಾರಂಟಿ ಯೋಜನೆಗಳನ್ನು ನಂಬಿಕೊಂಡು ಇರಲು ಆಗುವುದಿಲ್ಲ. ರಸ್ತೆ, ಸಮುದಾಯ ಭವನ ಹೀಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬೇಕಾಗುತ್ತದೆ ಎಂದು ಹೇಳಿದ್ದಾರೆ.

    ಸಿದ್ದರಾಮಯ್ಯ ಪುತ್ರ, ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಸೋಮವಾರ ಬೆಳಗಾವಿಯಲ್ಲಿ ನಾಯಕತ್ವ ಬದಲಾವಣೆ ವಿಚಾರದ ಕುರಿತು ಮಾತನಾಡಿದ್ದರು. ಮಂಗಳವಾರ ಸಿದ್ದರಾಮಯ್ಯ ಆಪ್ತರಾದ ಸಚಿವ ಬೈರತಿ ಸುರೇಶ್ ಸಹ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು.

    ಆದ್ದರಿಂದ ಈ ವಿಚಾರಕ್ಕೆ ಫುಲ್ ಸ್ಟಾಪ್ ಹಾಕಲು ನಾಯಕರು ತೀರ್ಮಾನಿಸಿದ್ದಾರೆ. ತಮ್ಮ ಬಣದ ಯಾವುದೇ ಶಾಸಕರು ನಾಯಕತ್ವ ಬದಲಾವಣೆ ವಿಚಾರದ ಕುರಿತು ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

    ನವೆಂಬರ್ ಕ್ರಾಂತಿಯ ಬಳಿಕ ಈಗ ಸಂಕ್ರಾಂತಿ ತನಕ ಕಾಯಿರಿ ಎಂದು ಕೆಲವು ಶಾಸಕರು ಹೇಳುತ್ತಿದ್ದಾರೆ. ಇದು ಪಕ್ಷದಲ್ಲಿ ಮತ್ತೆ ಗೊಂದಲಕ್ಕೆ ಕಾರಣವಾಗುತ್ತಿರುವ ಹಿನ್ನಲೆಯಲ್ಲಿ ಶಾಸಕರು ಮೌನ ವಹಿಸಬೇಕು ಎಂದು ಸೂಚನೆ ಕೊಡಲಾಗಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಕರೆಸಿಕೊಂಡು ಹೇಳಿಕೆ ಕುರಿತು ಮಾಹಿತಿ ಪಡೆದಿದ್ದಾರೆ. ಎಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳಬೇಕು, ಯಾವುದೇ ಹೇಳಿಕೆ ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

    ಹೈಕಮಾಂಡ್ ನಾಯಕರ ಸೂಚನೆಯಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಎರಡು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದರು. ಅಧಿವೇಶನದ ಸಮಯದಲ್ಲಿ ಯಾವುದೇ ನಾಯಕತ್ವದ ಬದಲಾವಣೆ ಚರ್ಚೆಗಳು ನಡೆಯಬಾರದು ಎಂದು ಎಚ್ಚರವಹಿಸಿದ್ದರು.

    ಉಪಹಾರಕೂಟದ ಬಳಿಕ ಡಿ.ಕೆ.ಶಿವಕುಮಾರ್, “ಹೈಕಮಾಂಡ್‌ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ. ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್‌ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್‌ ಗುಂಪು” ಎಂದು ಹೇಳಿದ್ದರು.

    “ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ ಕೊಡಲ್ಲ, ಅದರ ಅವಶ್ಯಕತೆಯೂ ಇಲ್ಲ. ಹೈಕಮಾಂಡ್‌ ಹೇಳಿದಂತೆ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಅದು ನಮ್ಮ ಕರ್ತವ್ಯ. ಪ್ರತಿಯೊಬ್ಬ ಶಾಸಕರನ್ನು, ಕಾರ್ಯಕರ್ತರನ್ನು ಮತ್ತು ನಮ್ಮ ಪಕ್ಷವನ್ನು ಶಕ್ತಿಶಾಲಿಯಾಗಿ ಬೆಳೆಸಬೇಕು. ಅದೂ ನಮ್ಮಿಬ್ಬರ ಕರ್ತವ್ಯ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ” ಎಂದು ತಿಳಿಸಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading