Saturday, August 8, 2026
spot_img
More
    spot_img
    HomeTop Story15 ದಿನದೊಳಗೆ ಬೆಳಗಾವಿಗೆ ಬಂದು ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು; ಸಿ.ಟಿ ರವಿಗೆ ಬಂತು ಬೆದರಿಕೆ...

    15 ದಿನದೊಳಗೆ ಬೆಳಗಾವಿಗೆ ಬಂದು ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು; ಸಿ.ಟಿ ರವಿಗೆ ಬಂತು ಬೆದರಿಕೆ ಪತ್ರ

    ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಬೆಳಗಾವಿ ಸುವರ್ಣ ಸೌಧದಲ್ಲೇ ಅಶ್ಲೀಲ ಪದ ಬಳಸಿದ ಆರೋಪದಲ್ಲಿ ಪೊಲೀಸರಿಜಕಂದ ಬಂಧನಕ್ಕೊಳಪಟ್ಟು ಸಿಐಡಿ ತನಿಖೆ ಎದುರಿಸುತ್ತಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಅವರ ಪುತ್ರನಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆಯ ಪತ್ರ ಬಂದಿದೆ.

    Advertisement

    ಅನಾಮಧೇಯ ಪತ್ರದಲ್ಲಿ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಚಿಕ್ಕಮಗಳೂರಿನಲ್ಲಿರುವ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇನೆ. ನಿಮ್ಮ ಜೊತೆಗೆ ನಿಮ್ಮ ಪುತ್ರನನ್ನು ಕೊಲೆ ಮಾಡುತ್ತೇವೆ ಹುಷಾರಾಗಿರಿ ಎಂದು ಬೆದರಿಕೆ ಹಾಕಿದ್ದಾನೆ.

    ಇನ್ನು ಪ್ರಕರಣ ಕುರಿತಂತೆ ಸಿ.ಟಿ.ರವಿ ಅವರ ಆಪ್ತ ಕಾರ್ಯದರ್ಶಿ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಎಸ್ಪಿ ವಿಕ್ರಮ್ ಅಮ್ಟೆ , ತತ್‍ಕ್ಷಣವೇ ಜಾರಿಯಾಗುವಂತೆ ಸಿ.ಟಿ.ರವಿ, ಪುತ್ರ ಸೂರ್ಯ ಸೇರಿದಂತೆ ಅವರ ಕುಟುಂಬದವರಿಗೆ ಹೆಚ್ಚಿನ ಭದ್ರತೆ ಒದಗಿಸುತ್ತೇವೆ ಎಂದು ಹೇಳಿದ್ದಾರೆ. ‌

    ಬೆಳಗಾವಿಯ ಸುವರ್ಣಸೌಧದ ಕಲಾಪ ನಡೆಯುತ್ತಿದ್ದ ವೇಳೆ, ಸಿ.ಟಿ.ರವಿ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ರವಿ ಅವರನ್ನು ನೀವೊಬ್ಬ ಕೊಲೆಗಾರ. ಇಬ್ಬರನ್ನು ಅಪಘಾತದಲ್ಲಿ ಸಾಯಿಸಿದ್ದೀಯ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು.

    ಈ ಸಂದರ್ಭದಲ್ಲಿ ಸಹನೆ ಕಳೆದುಕೊಂಡ ರವಿ, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಅಶ್ಲೀಲ ಪದ ಬಳಸಿದ್ದು ದೊಡ್ಡ ವಿವಾದ ಸೃಷ್ಟಿಸಿತ್ತು.

    ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಪರಿಷತ್‍ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಜನರ ಗುಂಪೊಂದು ಸಿಟಿ ರವಿ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದರು. ಅವಳಹೇಳನಕಾರಿ ಪದ ಬಳಕೆ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಸಿಟಿ ರವಿ ಅವರು ಶುಕ್ರವಾರ ಸಿಐಡಿ ವಿಚಾರಣೆಗೆ ಹಾಜರಾಗಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading