Friday, August 7, 2026
spot_img
More
    spot_img
    HomeTop Storyಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ: ರಾಜ್ಯದಲ್ಲಿ ವರ್ಷದ ಮೊದಲ ಮಳೆಯಾಗುವ ಸಾಧ್ಯತೆ

    ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ: ರಾಜ್ಯದಲ್ಲಿ ವರ್ಷದ ಮೊದಲ ಮಳೆಯಾಗುವ ಸಾಧ್ಯತೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    Advertisement

    ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆಯು, ಆಗ್ನೇಯ ಮತ್ತು ಪಕ್ಕದ ನೈಋತ್ಯ ಬಂಗಾಳಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಈಗ ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳಕೊಲ್ಲಿಯ ಮೇಲೆ ಇದೆ. ಸಮುದ್ರ ಮಟ್ಟದಿಂದ 3.1 ಕಿ.ಮೀವರೆಗೆ ವಿಸ್ತರಿಸಿದೆ ಎಂದು ಮಾಹಿತಿ ನೀಡಿದೆ.

    ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜನವರಿ.13 ಮತ್ತು 14ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಪ್ರಮುಖವಾಗಿ ಜನವರಿ.13ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಉಳಿದ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.

    ಇನ್ನು ವಿಜಯಪುರ, ಬೀದರ್‌, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಂಜು ಬೀಳಲಿದ್ದು,
    ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

    ಇನ್ನು ಜನವರಿ.14ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading