ಲಂಡನ್: ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಇಂದಿನಿಂದ ( ಜೂನ್ 11 ) ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಿದ್ದು, ಈ ಮಹಾ ಕಾಳಗದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆರಿಸಿಕೊಂಡು ಆಸ್ಟ್ರೇಲಿಯಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಆಸ್ಟ್ರೇಲಿಯಾ ಆರಂಭಿಕ ಆಘಾತ ಅನುಭವಿಸಿದೆ.
ದಕ್ಷಿಣ ಆಫ್ರಿಕಾದ ಕಗಿಸೊ ರಬಾಡಾ ಎಸೆದ ಓವರ್ ಒಂದರಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರಾದ ಉಸ್ಮಾನ್ ಖವಾಜಾ ಹಾಗೂ ಕೆಮರೂನ್ ಗ್ರೀನ್ ವಿಕೆಟ್ ಒಪ್ಪಿಸುವ ಮೂಲಕ ಕೆಟ್ಟ ಆರಂಭ ಮಾಡಿದ್ದಾರೆ.
ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಉಸ್ಮಾನ್ ಖವಾಜಾ 20 ಎಸೆತಗಳನ್ನು ಎದುರಿಸಿ ಯಾವುದೇ ರನ್ ಕಲೆಹಾಕದೆಯೇ ಕಗಿಸೊ ರಬಾಡಾ ಎಸೆದ ಆರನೇ ಓವರ್‌ನ ಮೂರನೇ ಎಸೆತದಲ್ಲಿ ಸ್ಲಿಪ್‌ಗೆ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ಅದೇ ಓವರ್ ಕೊನೆಯ ಎಸೆತದಲ್ಲಿ ಆಗ ತಾನೇ ಕಣಕ್ಕಿಳಿದು ಒಂದು ಬೌಂಡರಿ ಬಾರಿಸಿದ್ದ ಕೆಮರೂನ್ ಗ್ರೀನ್ ಸಹ ರನ್ ಬಾರಿಸಲು ಯತ್ನಿಸಿ ಸ್ಲಿಪ್‌ಗೆ ಕ್ಯಾಚ್ ನೀಡಿ ಔಟ್ ಆದರು. ಈ ಮೂಲಕ ಆಸ್ಟ್ರೇಲಿಯಾ ಕೇವಲ 16 ರನ್‌ಗೆ ತನ್ನ 2 ವಿಕೆಟ್ ಕಳೆದುಕೊಂಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


