ಕಲಬುರಗಿ: ನಿನ್ನೆಯಷ್ಟೇ ( ಜೂನ್ 10 ) ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ದಿಢೀರ್ ಭೇಟಿ ನೀಡಿದ್ದರು.
ರಾಜ್ಯ ರಾಜಕಾರಣದಲ್ಲಿ ನಡೆದ ಇತ್ತೀಚೆಗಿನ ಬೆಳವಣಿಗೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯೊಡನೆ ಮಾತುಕತೆ ನಡೆಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಯ ಬಗ್ಗೆ ಚರ್ಚೆ ನಡೆದಿದೆ ಹಾಗೂ ಸಚಿವ ಸಂಪುಟದ ಬಗ್ಗೆ ಸಹ ಚರ್ಚೆ ನಡೆದಿದೆ ಎನ್ನಲಾಗಿತ್ತು. ಈ ಕುರಿತು ಇಂದು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ನಿನ್ನೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಆಗಲಿಲ್ಲ, ಹೊಸ ಮಂತ್ರಿ ಮಂಡಲ ರಚನೆ ಬಗ್ಗೆಯೂ ಚರ್ಚೆ ಆಗಿಲ್ಲ. ಜಾತಿಗಣತಿ ಬಗ್ಗೆ ಚರ್ಚೆ ಆಯಿತು. ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಚರ್ಚೆ ಆಯಿತು. ಈ ಕುರಿತು ರಾಹುಲ್ ಗಾಂಧಿಯವರು ಇನ್ನು ಮುಂದೆ ಯಾವುದೇ ಕಾರ್ಯಕ್ರಮ ಮಾಡಿದರೂ ನೋಡಿಕೊಂಡು ಎಲ್ಲರ ಜೊತೆ ಚರ್ಚಿಸಿ, ಒಟ್ಟುಗೂಡಿ ಮಾಡಬೇಕು. ತಪ್ಪು ಯಾರದ್ದು ಇದೆಯೋ ಅವರನ್ನು ಕಂಡುಹಿಡಿದು ಶಿಕ್ಷೆ ಕೊಡಬೇಕು ಎಂದು ಸಮಾಧಾನದಿಂದಲೇ ಹೇಳಿದ್ದಾರೆ ಎಂದು ತಿಳಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


