Monday, August 31, 2026
spot_img
More
    spot_img
    HomeBreaking Newsಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ: ಕಣ್ಣೀರು ಹಾಕಿದ ಅಭಿಮಾನಿಗಳು

    ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ: ಕಣ್ಣೀರು ಹಾಕಿದ ಅಭಿಮಾನಿಗಳು

    ಬೆಂಗಳೂರು (ಜು.11): ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಕೆಲವು ವರ್ಷಗಳಿಂದ ಈ ಕಾಯಿಲೆಯಿಂದ ತೀವ್ರವಾಗಿ ಬಳಲುತ್ತಿದ್ದರು. ಇತ್ತೀಚೆಗೆ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಇದರ ಪರಿಣಾಮ, ಅವರು ಹೆಚ್ಚಿನ ದಿನಗಳ ಕಾಲ ವಿಶ್ರಾಂತಿ ಪಡೆಯಬೇಕಾಯಿತು. ಇಂದು ಸಂಜೆ, ಅವರು ತಮ್ಮ ಬನಶಂಕರಿ ದ್ವಿತೀಯ ಹಂತದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

    Advertisement

    ಅಪರ್ಣಾ ಅವರ ಸಾವು ಕನ್ನಡಿಗರಿಗೆ ತುಂಬಾ ದೊಡ್ಡ ಆಘಾತವಾಗಿದೆ. ಸಿನಿಮಾ, ಟಿವಿ, ಸಾಹಿತ್ಯ ಲೋಕದ ಹಲವರು ಅವರುರ ಸಾವುತ ತಿಳಿದು ಕಂಬನಿ ಮಿಡಿದಿದ್ದಾರೆ. 1984ರಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಮಸಣದ ಹೂವು’ ಚಿತ್ರದಲ್ಲಿ ಅಭಿನಯಿಸಿ ಚಲನಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿದ ಅಪರ್ಣಾ, ನಂತರ ‘ಇನ್ಸ್‌ಪೆಕ್ಟರ್ ವಿಕ್ರಮ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಆದರೆ, ಚಲನಚಿತ್ರಕ್ಕಿಂತ ಹೆಚ್ಚಾಗಿ ಅವರು ನಿರೂಪಕಿಯಾಗಿ ಜನಮನ ಗೆದ್ದಿದ್ದರು.

    ಸ್ಪಷ್ಟ ಕನ್ನಡದ ನಿರೂಪಣೆ: ಅಪರ್ಣಾ ಅವರ ಸ್ಪಷ್ಟ ಕನ್ನಡದ ನಿರೂಪಣಾ ಶೈಲಿಯಿಂದ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿ ಮನೆಮಾತಾಗಿದ್ದರು. ನಂತರ, ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರಮವೊಂದನ್ನು ಎಂಟು ಗಂಟೆಗಳ ಕಾಲ ನಿರೂಪಿಸಿ ದಾಖಲೆ ಬರೆದಿದ್ದರು.

    ಬಿಗ್ ಬಾಸ್ ಮತ್ತು ಮಜಾ ಟಾಕೀಸ್: 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿ, ರಿಯಾಲಿಟಿ ಶೋಗಳಲ್ಲಿ ತಮ್ಮ ಪ್ರಭಾವ ತೋರಿಸಿದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ನಿರ್ವಹಿಸಿ, ಹಾಸ್ಯ ನಟಿಯಾಗಿ ಜನರ ಮನಗೆದ್ದಿದ್ದರು. ಈ ಮೂಲಕ ವಿಭಿನ್ನವಾಗಿ ಕಾಣಿಸಿಕೊಂಡಿದ್ದ ಅವರು, ಹಾಸ್ಯ ಪಾತ್ರಗಳಲ್ಲಿ ತಮ್ಮ ಅಭಿನಯ ಕೌಶಲ್ಯವನ್ನು ಮೆರೆದಿದ್ದರು.

    ಬಹುಮುಖ ಪ್ರತಿಭೆ: ಅಪರ್ಣಾ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಅಂಕಣ ಬರೆಯುತ್ತಿದ್ದು, ಓದುಗರಿಗೂ ಹತ್ತಿರವಾಗಿದ್ದರು. ಅವರ ತಂದೆಯೂ ಕನ್ನಡ ಪ್ರಭ ಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು. ಮೊದಲ ಮದುವೆಯಿಂದ ವಿಚ್ಛೇದನ ಪಡೆದಿದ್ದ ಅಪರ್ಣಾ, ಖ್ಯಾತ ಲೇಖಕ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.

    ಅಪೂರ್ಣತೆಯ ಅನುಭವ: ಅಪರ್ಣಾ ಅವರ ನಿಧನವು ಕನ್ನಡಿಗರಿಗೆ ನುಂಗಲಾರದ ತುತ್ತಾಗಿದೆ. ಕನ್ನಡ ಸಂಸ್ಕೃತಿಯನ್ನು ಪ್ರೀತಿಸಿದ ಈ ಬಹುಮುಖ ಪ್ರತಿಭೆಯ ಅಗಲಿಕೆಯಿಂದ, ಕನ್ನಡ ಚಿತ್ರರಂಗ, ದೂರದರ್ಶನ ಮತ್ತು ಸಾಹಿತ್ಯ ಲೋಕದಲ್ಲಿ ಅಪೂರ್ಣತೆಯ ಅನುಭವವಾಗಿದೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading