Monday, November 2, 2026
spot_img
More
    spot_img
    HomeEntertainmentಸಿದ್ದರಾಮಯ್ಯ - ಯುವ ಭೇಟಿ; ʼಎಕ್ಕʼ ಗೆಲ್ಲಲಿ ಎಂದ ಸಿದ್ದರಾಮಯ್ಯ

    ಸಿದ್ದರಾಮಯ್ಯ – ಯುವ ಭೇಟಿ; ʼಎಕ್ಕʼ ಗೆಲ್ಲಲಿ ಎಂದ ಸಿದ್ದರಾಮಯ್ಯ

    ದೊಡ್ಮನೆ ನಟ ಯುವ ರಾಜ್‌ಕುಮಾರ್‌ ನಟನೆಯ ಎರಡನೇ ಚಿತ್ರ ʼಎಕ್ಕʼ ಇದೇ ತಿಂಗಳ 18ರಂದು ಬಿಡುಗಡೆಗೊಳ್ಳಲಿದ್ದು, ಇಂದು (ಜುಲೈ 11) ಚಿತ್ರತಂಡ ಟ್ರೈಲರ್‌ ಬಿಡುಗಡೆ ಮಾಡಿದೆ.

    ಟ್ರೈಲರ್‌ ವೀಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಬಿಡುಗಡೆ ಹಿಂದಿನ ದಿನ ಚಿತ್ರತಂಡ ಪ್ರೀಮಿಯರ್‌ ಶೋ ಆಯೋಜಿಸಲು ತೀರ್ಮಾನಿಸಿದೆ. ಈ ಪ್ರೀಮಿಯರ್‌ ಶೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಟ ಯುವ ರಾಜ್‌ಕುಮಾರ್‌ ಭೇಟಿಯಾಗಿ ಆಹ್ವಾನಿಸಿದ್ದಾರೆ.

    ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಸಿದ್ದರಾಮಯ್ಯ ʼನಟ ಯುವ ರಾಜ್‌ಕುಮಾರ್ ಅವರು ಇಂದು ಕಾವೇರಿ ನಿವಾಸದಲ್ಲಿ ನನ್ನನ್ನು ಭೇಟಿಯಾಗಿ, ಜುಲೈ 18 ರಂದು ತೆರೆ ಕಾಣಲಿರುವ ತಾವು ನಾಯಕನಟನಾಗಿ ಅಭಿನಯಿಸಿರುವ “ಎಕ್ಕ” ಸಿನಿಮಾ ಪ್ರೀಮಿಯರ್ ಶೋ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು. ರಾಜ್‌ಕುಮಾರ್ ಅವರ ಕುಟುಂಬದ ಜೊತೆಗಿನ ನನ್ನ ಒಡನಾಟ ನಾಲ್ಕೈದು ದಶಕಗಳಷ್ಟು ಹಳೆಯದು. ರಾಘವೇಂದ್ರ ರಾಜ್‌ಕುಮಾರ್, ಶಿವಣ್ಣ ಮತ್ತು ಅಪ್ಪು ತಮ್ಮ ತಂದೆಯಂತೆ ಅಭಿನಯದಲ್ಲಿ ಮಾತ್ರವಲ್ಲ, ಸಾಮಾಜಿಕ‌ ಕಳಕಳಿಯಲ್ಲೂ ಎತ್ತಿದಕೈ. ರಾಜಣ್ಣನ ಕುಟುಂಬದ ಮೂರನೇ ತಲೆಮಾರು ಅದೇ ಹಾದಿಯಲ್ಲಿ ಹೆಜ್ಜೆಹಾಕಲು ಆರಂಭಿಸಿದ್ದು ಕಂಡು ಖುಷಿಯಾಯಿತು. ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದೆʼ ಎಂದು ಬರೆದುಕೊಂಡಿದ್ದಾರೆ.

    ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ನಟನೆಯ ʼಜೂನಿಯರ್‌ʼ ಟ್ರೈಲರ್‌ ಬಿಡುಗಡೆ; ಹೇಗಿದೆ ಕಿರೀಟಿ ಪರ್ಫಾಮೆನ್ಸ್?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search