ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಅಧಿಕಾರ ಹಂಚಿಕೆ ವಿಚಾರ ಕೇಳಿಬರುತ್ತಲೇ ಇದ್ದು, ಈಗಲೂ ಸಹ ಸೆಪ್ಟೆಂಬರ್ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾತುಗಳು ಹರಿದಾಡಿವೆ.
ಕಾಂಗ್ರೆಸ್‌ನ ಕೆಲ ಶಾಸಕರೇ ಮುಖ್ಯಮಂತ್ರಿ ಬದಲಾವಣೆಯಾಗಬೇಕು ಎಂದಿದ್ದು, ನಿನ್ನೆ ( ಜುಲೈ 10 ) ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಐದು ವರ್ಷಗಳ ಕಾಲ ನಾನೇ ಸಿಎಂ ಯಾವುದೇ ಅಧಿಕಾರ ಹಂಚಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ಹೇಳಿಕೆಗೆ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಪ್ರತಿಕ್ರಿಯೆ ನೀಡಿದ್ದು, ಅಧಿಕಾರ ಹಂಚಿಕೆಯಾಗಬೇಕು, ಸಿದ್ದರಾಮಯ್ಯನವರು ಇಳಿಯಬೇಕು ಎಂದು ಯಾರೂ ಹೇಳಿಲ್ಲ ಎಂದರು. ಹಾಗಾದರೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ನಡೆಸುತ್ತಿರುವ ಪ್ರಯತ್ನ ಸುಳ್ಳಾ ಎಂಬ ಪ್ರಶ್ನೆಗೆ ಉತ್ತರಿಸಿದ ಉದಯ್ ಡಿಕೆ ಶಿವಕುಮಾರ್ 40 ವರ್ಷ ಅನುಭವ ಇರುವವರು, ಯುವ ಕಾಂಗ್ರೆಸ್ ಮಟ್ಟದಿಂದ ಇಂದು ರಾಜ್ಯಾಧ್ಯಕ್ಷನಾಗಿ ಚುಕ್ಕಾಣಿ ಹಿಡಿದಿದ್ದಾರೆ, ಹೀಗಾಗಿ ಅವರು ಆ ಸ್ಥಾನಕ್ಕೆ ಅರ್ಹರು, ಅವರು ಎರಡು ಅವಧಿಗೆ ಸಿಎಂ ಆಗಲಿದ್ದಾರೆ ಎಂದು ಹೇಳಿದರು.
ಭಾರತ vs ಇಂಗ್ಲೆಂಡ್ 3ನೇ ಟೆಸ್ಟ್: ಕುಸಿದ ಇಂಗ್ಲೆಂಡ್‌ಗೆ ರೂಟ್ ಆಸರೆ
ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


