Wednesday, November 4, 2026
spot_img
More
    spot_img
    HomeLatest newsಡಿಕೆಶಿಗಿಂತ ನನಗೆ ಹೆಚ್ಚು ಶಾಸಕರ ಬೆಂಬಲ ಎಂದ ಸಿದ್ದರಾಮಯ್ಯಗೆ ಡಿಕೆಶಿ ಮೊದಲ ಪ್ರತಿಕ್ರಿಯೆ

    ಡಿಕೆಶಿಗಿಂತ ನನಗೆ ಹೆಚ್ಚು ಶಾಸಕರ ಬೆಂಬಲ ಎಂದ ಸಿದ್ದರಾಮಯ್ಯಗೆ ಡಿಕೆಶಿ ಮೊದಲ ಪ್ರತಿಕ್ರಿಯೆ

    ದೇವನಹಳ್ಳಿ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ದೆಹಲಿಗೆ ತೆರಳಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ದೆಹಲಿಗೆ ಹೋಗಿದ್ದೇಕೆ ಹಾಗೂ ಸಿದ್ದರಾಮಯ್ಯನವರ ಹೇಳಿಕೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

    ಹಲವಾರು ಅರ್ಜಿಗಳಿದ್ದವು, ಅವುಗಳ ಕೆಲಸವಿತ್ತು ಹಾಗೂ ತಮ್ಮ ತಾಲೂಕು ಮಟ್ಟದ ಕಾರ್ಯಕರ್ತರಿಗೆ ಚುನಾವಣೆ ಸಮಯದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕೆಲ ಕೆಲಸಗಳು ಆಗಬೇಕಿತ್ತು, ಅವುಗಳ ಸಲುವಾಗಿ ಸಮಯ ಕಳೆದೆ ಎಂದರು. ಇನ್ನು ಇದೇ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೆಹಲಿಗೆ ಭೇಟಿ ನೀಡಿ ಅಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ನಾನೇ ಐದು ವರ್ಷ ಸಿಎಂ, ಪವರ್‌ ಶೇರಿಂಗ್‌ ಇಲ್ಲ ಎಂದಿದ್ದರು. ಅಲ್ಲದೇ ಡಿಕೆಶಿಗೆ ಕೆಲವು ಶಾಸಕರ ಬೆಂಬಲವಷ್ಟೇ ಎಂದಿದ್ದರು.

    ಇದರ ಕುರಿತು ಮಾತನಾಡಿದ ಡಿಕೆ ಶಿವಕುಮಾರ್‌ ʼನಿಮ್ಮ ಪ್ರಶ್ನೆಗಳಿಗೆಲ್ಲ ಅವರೇ ಉತ್ತರ ಕೊಟ್ಟಿದ್ದಾರೆ. ಅವರು ಉತ್ತರ ಕೊಟ್ಟ ಮೇಲೆ ಪದೇಪದೆ ಮಾತನಾಡುವುದು ನಮಗೂ ಸೂಕ್ತ ಅಲ್ಲ ಎಂದರು. ಅಲ್ಲದೇ ಇದರ ಬಗ್ಗೆ ಕಾಮೆಂಟ್‌ ಮಾಡುವುದಿಲ್ಲ, ಮಾತನಾಡಲು ಹೋಗುವುದಿಲ್ಲ ಎಂದರು.

    ಸರ್ಕಾರಿ ಶಾಲೆ ಮಕ್ಕಳಿಗೆಲ್ಲ ಫ್ರೀ ಬಸ್‌ ಎಂದ ಡಿಕೆಶಿ; ಇಲ್ಲ ಎಂದ ಸಾರಿಗೆ ಸಚಿವರು!

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search