ಬೆಂಗಳೂರು: ನಗರದಲ್ಲಿಂದು ( ಜುಲೈ 11 ) 148 ಹೊಸ ಎಲೆಕ್ಟ್ರಿಕ್ ಬಸ್ಗಳಿಗೆ ಚಾಲನೆ ನೀಡಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಪಿಎಸ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಳಗ್ಗೆ ಈ ಕುರಿತು ಟ್ವೀಟ್ ಮಾಡಿದ್ದ ಡಿಕೆ ಶಿವಕುಮಾರ್ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಬಸ್ ಆರಂಭಿಸಲು ತೀರ್ಮಾನಿಸಿದೆ ಎಂದು ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉಪಮುಖ್ಯಮಂತ್ರಿಯಾಗಿ ಆ ರೀತಿಯ ಸಲಹೆಯನ್ನು ಕೊಟ್ಟಿದ್ದಾರೆ, ಅದು ಮೊದಲು ಹಣಕಾಸು ವಿಭಾಗಕ್ಕೆ ಹೋಗಿ ನಂತರ ಅದರ ವೆಚ್ಚ 10 ಕೋಟಿ ಮೀರಿದರೆ ಸಂಪುಟದಲ್ಲಿ ಚರ್ಚಿಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಸದ್ಯಕ್ಕೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
ಅಮೆಜಾನ್ ಪ್ರೈಮ್ ಡೇ 2025: ಗ್ರಾಹಕರಿಗೆ ಭರ್ಜರಿ ಆಫರ್ ಗಳ ಸುರಿಮಳೆ 3 ದಿನಗಳ ಮೆಗಾ ಸೇಲ್ ಮಿಸ್ ಮಾಡ್ಬೇಡಿ!
ಎಐ ಕೃಷಿ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


