Tuesday, November 3, 2026
spot_img
More
    spot_img
    HomeLatest newsಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದ ನಿಶ್ಚಲಾನಂದನಾಥ ಸ್ವಾಮೀಜಿ

    ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದ ನಿಶ್ಚಲಾನಂದನಾಥ ಸ್ವಾಮೀಜಿ

    ಮಂಡ್ಯ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಹಂಬಲ ಬಹಳ ದಿನಗಳಿಂದ ಇದೆ. ಕೇವಲ ಒಕ್ಕಲಿಗರಲ್ಲದೆ ಅವರ ಇತರೆ ಅಭಿಮಾನಿಗಳ ಆಗ್ರಹವೂ ಆಗಿದೆ ಎಂದು ವಿಶ್ವ ಒಕ್ಕಲಿಗರ ಮಠದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಡಿಕೆಶಿ ಪರ ಬ್ಯಾಟಿಂಗ್ ಬೀಸಿದ್ದಾರೆ.

    ನಗರದ ಬಾಲಗಂಗಾಧರನಾಥ ಸಮುದಾಯ ಭವನದಲ್ಲಿ ಮಂಡ್ಯ ಜಿಲ್ಲಾ ಚುಂಚಶ್ರೀ ಮಹಿಳಾ ಒಕ್ಕಲಿಗರ ವೇದಿಕೆ ವತಿಯಿಂದ ಶುಕ್ರವಾರ ನಡೆದ ಸಾಮೂಹಿಕ ಮಹಾಲಕ್ಷ್ಮಿ ಆಷಾಡ ಮಾಸದ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ದುಡಿದಿದ್ದಾರೆ. ಅವರೊಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷ 135 ಸ್ಥಾನ ಗಳಿಸಲು ಸಾಕಷ್ಟು ಶ್ರಮಿಸಿದ್ದಾರೆ ಎಂದರು.

    ಕಾಂಗ್ರೆಸ್ ಪಕ್ಷ ಈ ಮಟ್ಟಕ್ಕೆ ಬರಲು ಅವರು ಕಾರಣಕರ್ತರಾಗಿದ್ದಾರೆ. ಪಕ್ಷವನ್ನ ತಾಯಿ ರೀತಿ ಪ್ರೀತಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕು. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆ ಕಾದು ನೋಡೋಣ, ಡಿ.ಕೆ. ಶಿವಕುಮಾರ್ ಖಂಡಿತ ಸಿಎಂ ಆಗೇ ಆಗ್ತರೆ. ಅವರು ಸಂಯಮ ವರ್ತಿಗಳು, ಶಿಸ್ತಿನ ಸಿಪಾಯಿ. ಅವರು ತಾಳ್ಮೆಯಿಂದ ಕಾದು, ಹೈಕಮಾಂಡ್‌ನಿಂದ ಅಧಿಕಾರ ಪಡೆಯುತ್ತಾರೆ ಎಂಬ ನಂಬಿಕೆ ಇದೆ.
    ಹಳೇ ಮೈಸೂರು ಭಾಗದ ಒಕ್ಕಲಿಗರು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ. ಈ ಭಾಗದಲ್ಲಿ ಡಿಕೆಶಿ ಪರ ಹೆಚ್ಚು ಒಲವು ತೋರಿದ್ದರಿಂದ 135 ಸ್ಥಾನ ಬರಲು ಕಾರಣವಾಯಿತು ಎಂದರು.

    ಒಂದಲ್ಲ 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ: ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದೇನು?

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search