ಬೆಂಗಳೂರು: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆಯನ್ನು ಜೂನ್ 4ರಂದು ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಸೇರಿದ್ದ ಕಾರಣ ಕಾಲ್ತುಳಿತ ಉಂಟಾಗಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾ. ಜಾನ್ ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗಕ್ಕೆ ವಹಿಸಿತ್ತು.
ಇದೀಗ ವರದಿ ಪೂರ್ಣಗೊಳಿಸಿರುವ ನ್ಯಾ. ಜಾನ್ ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿಯನ್ನು ಸಲ್ಲಿಸಿದೆ.
ಈ ಕುರಿತ ಮುಂದಿನ ನಿರ್ಧಾರಗಳನ್ನು ರಾಜ್ಯ ಸರ್ಕಾರ ಜುಲೈ 17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಿದೆ.
ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ನಟನೆಯ ʼಜೂನಿಯರ್ʼ ಟ್ರೈಲರ್ ಬಿಡುಗಡೆ; ಹೇಗಿದೆ ಕಿರೀಟಿ ಪರ್ಫಾಮೆನ್ಸ್?
ಕೃಷಿ ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


