ಹೊಸದಿಲ್ಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಚರ್ಚೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ವೇಳೆಯೇ ದೆಹಲಿ ಪ್ರವಾಸ ಕೈಗೊಳ್ಳುವ ಮೂಲಕ ಕುತೂಹಲ ಮೂಡಿಸಿದ್ದ ಸಿದ್ದರಾಮಯ್ಯ ನಗರದಲ್ಲಿ ಎರಡು ದಿನ ಬೀಡುಬಿಟ್ಟಿದ್ದರು.
ಇಂದು ( ಜುಲೈ 11 ) ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿರುವ ಸಿದ್ದರಾಮಯ್ಯ ಮಧ್ಯಾಹ್ನ 3 ಗಂಟೆಯೊಳಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.
ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ಸಮಾಲೋಚನೆ ಮಾಡಲಿದ್ದು, ದೆಹಲಿ ಚರ್ಚೆ ಹಾಗೂ ಬೆಳವಣಿಗೆಗಳ ಬಗ್ಗೆ ಮಾತನಾಡುವ ಸಾಧ್ಯತೆಗಳಿವೆ. ಇನ್ನು ರಾಹುಲ್ ಗಾಂಧಿ ಅವರನ್ನು ಭೇಟಿಯಾಗದೆಯೇ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆ ಎನ್ನಲಾಗುತ್ತಿದೆ.
ಇನ್ನು ನಿನ್ನೆ ದೆಹಲಿಯಲ್ಲಿ ಸಿಎಂ ಬದಲಾವಣೆ ಕುರಿತು ಮಾತನಾಡಿದ್ದ ಸಿದ್ದರಾಮಯ್ಯ ಪವರ್ ಶೇರಿಂಗ್ ಮಾತಿಲ್ಲ, ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿಕೆ ನೀಡುವ ಮೂಲಕ ಬದಲಾವಣೆ ಚರ್ಚೆಗಳಿಗೆ ಟಕ್ಕರ್ ಕೊಟ್ಟರು.
ಭಾರತ vs ಇಂಗ್ಲೆಂಡ್ 3ನೇ ಟೆಸ್ಟ್: ಕುಸಿದ ಇಂಗ್ಲೆಂಡ್‌ಗೆ ರೂಟ್ ಆಸರೆ
ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


