ಲಂಡನ್: ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿದ್ದು, ಮೊದಲ ದಿನದಾಟದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿದೆ.
ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದ ಜಾಕ್ ಕ್ರಾವ್ಲೆ 18 ರನ್ ಹಾಗೂ ಬೆನ್ ಡಕೆಟ್ 23 ರನ್ ಗಳಿಸಿ ಔಟ್ ಆದರು. ಈ ಮೂಲಕ ತಂಡ ಕೇವಲ 42 ರನ್‌ಗೆ ತನ್ನ ಆರಂಭಿಕರನ್ನು ಕಳೆದುಕೊಂಡು ಕಳಪೆ ಆರಂಭ ಪಡೆದುಕೊಂಡಿತು. ಬಳಿಕ ಮೂರನೇ ವಿಕೆಟ್‌ಗೆ ಜತೆಯಾದ ಓಲ್ಲಿ ಪೋಪ್ ಹಾಗೂ ಜೋ ರೂಟ್ 14 ಓವರ್‌ಗಳಿಂದ 49 ಓವರ್‌ಗಳವರೆಗೆ ಜತೆಯಾಟವನ್ನಾಡಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.
ಓಲ್ಲಿ ಪೋಪ್ 44 ರನ್ ಗಳಿಸಿದರೆ, ಜೋ ರೂಟ್ ದಿನದಾಟದಂತ್ಯಕ್ಕೆ 99 ರನ್ ಗಳಿಸಿದ ಅಜೇಯರಾಗಿ ಉಳಿದುಕೊಂಡಿದ್ದಾರೆ. ಹ್ಯಾರಿ ಬ್ರೂಕ್ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದು, ನಾಯಕ ಬೆನ್ ಸ್ಟೋಕ್ಸ್ 39 ರನ್ ಗಳಿಸಿ ಅಜೇಯರಾಗಿ ಉಳಿದುಕೊಂಡಿದ್ದಾರೆ.
ಭಾರತದ ಪರ ನಿತಿಶ್ ಕುಮಾರ್ ರೆಡ್ಡಿ 2 ವಿಕೆಟ್, ಜಸ್‌ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು.
ನಿಮ್ಮ ಚರ್ಮ ಫ್ರೆಶ್ ಆಗಿರಬೇಕೆ? ವಾರಕ್ಕೆ ಒಮ್ಮೆ ಫೇಷಿಯಲ್ ಸ್ಟೀಮ್ ಮಾಡಿದರೆ ಸಾಕು
ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


