ಬೆಂಗಳೂರು: ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ದೇವಸ್ಥಾನದ ಟ್ರಸ್ಟ್ನ ಹಣಕಾಸಿನ ಅವ್ಯವಹಾರ, ಅವ್ಯವಸ್ಥೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರದ ವಶಕ್ಕೆ ಪಡೆದು ‘ಘೋಷಿತ ಸಂಸ್ಥೆ’ ಎಂದು ಆದೇಶಿಸಲಾಗಿದೆ.
ದೇವಸ್ಥಾನದ ಹುಂಡಿ ವರ್ಗಾವಣೆ ಸಂದರ್ಭದಲ್ಲಿ ಸಿಬ್ಬಂದಿಯೇ ಕಳ್ಳತನ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಜಿಲ್ಲಾಧಿಕಾರಿಗೆ ಪತ್ರ ಬರೆದು ದೇವಸ್ಥಾನವನ್ನು ವಶಕ್ಕೆ ಪಡೆದು ಘೋಷಿತ ಸಂಸ್ಥೆಯಾಗಿಸುವಂತೆ ಕೋರಿದ್ದರು.
ಈ ಸಂಬಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆದಾಗ ದೇವಸ್ಥಾನಕ್ಕೆ ಲಕ್ಷಾಂತರ ರುಪಾಯಿ ಆದಾಯವಿದೆ. ಆದರೆ, ಖರ್ಚು ವೆಚ್ಚದಲ್ಲಿ ಪಾರದರ್ಶಕತೆ ಇಲ್ಲ. ಉಳಿತಾಯ ಇಲ್ಲದೆ ಖರ್ಚು ಮಾಡಲಾಗುತ್ತಿದೆ. ಟ್ರಸ್ಟ್ ಪದಾಧಿಕಾರಿಗಳಲ್ಲಿ ಹೊಂದಾಣಿಕೆ ಇಲ್ಲದಿರುವುದು ಹಾಗೂ ಹಣದ ದುರುಪಯೋಗ ಆಗಿದ್ದು ಕಂಡು ಬಂದಿತ್ತು. ಅಲ್ಲದೆ, ಮುಜರಾಯಿ ಇಲಾಖೆ ಆಯುಕ್ತರು ಪತ್ರ ಬರೆದ ಬಳಿಕ ಕೆಲ ದಾಖಲೆಗಳನ್ನು ಸೃಷ್ಟಿಸಿದ್ದು ಪತ್ತೆಯಾಗಿತ್ತು. ಇದರಿಂದ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದ್ದು, ಹೀಗಾಗಿ ದೇವಸ್ಥಾನವನ್ನು ವಶಕ್ಕೆ ಪಡೆಯುವುದು ಸೂಕ್ತ ಎಂದು ವರದಿ ಸಲ್ಲಿಸಲಾಗಿತ್ತು.
ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ನಟನೆಯ ʼಜೂನಿಯರ್ʼ ಟ್ರೈಲರ್ ಬಿಡುಗಡೆ; ಹೇಗಿದೆ ಕಿರೀಟಿ ಪರ್ಫಾಮೆನ್ಸ್?
ಕೃಷಿ ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


