ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್ ಕಟ್ ಆಗಿ ಕೆರೆಗೆ ಬಿದ್ದಿರುವ ಘಟನೆ ಎಚ್‌ಡಿ ಕೋಟೆ ತಾಲೂಕಿನ ಗೊಂತಗಾಲ ಹುಂಡಿ ಬಳಿ ನಡೆದಿದೆ.
ನಿನ್ನೆ ( ಜುಲೈ 10 ) ಈ ಘಟನೆ ನಡೆದಿದ್ದು, ಬಸ್‌ನಲ್ಲಿ 20ರಿಂದ 30 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಎಚ್‌ಡಿ ಕೋಟೆಯಿಂದ ಕುರ್ಣೇಗಾಲಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.
ಇನ್ನು 20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಸರಗೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗತ್ತಿದೆ.
ಸದ್ಯ ಬಸ್‌ನ ಸ್ಟೇರಿಂಗ್ ಕಟ್ ಆಗಿರುವುದರ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದು, ಸಾರಿಗೆ ಇಲಾಖೆ ವಿರುದ್ಧ ಹಾಗೂ ಡಿಪೋ ಮ್ಯಾನೇಜ್‌ಮೆಂಟ್ ವಿರುದ್ಧ ಪ್ರಯಾಣಿಕರು ಕಿಡಿಕಾರಿದ್ದಾರೆ.
ಭಾರತ vs ಇಂಗ್ಲೆಂಡ್ 3ನೇ ಟೆಸ್ಟ್: ಕುಸಿದ ಇಂಗ್ಲೆಂಡ್‌ಗೆ ರೂಟ್ ಆಸರೆ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


