ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡು ಚುನಾವಣಾ ದುಷ್ಕೃತ್ಯಗಳನ್ನು ನಡೆಸುತ್ತಿದೆ ಎಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಸೋಮವಾರ (ಆಗಸ್ಟ್ 11) ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಈಗ ರಾಹುಲ್ ಗಾಂಧಿ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ರಾಹುಲ್ ಗಾಂಧಿ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.
ಚುನಾವಣಾ ಆಯೋಗಕ್ಕೆ ‘ಮತಗಳ್ಳತನ’ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. .ರಾಹುಲ್ ಗಾಂಧಿ ಜೊತೆಗೆ, ಪ್ರಿಯಾಂಕಾ ಗಾಂಧಿ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಇತರ ವಿರೋಧ ಪಕ್ಷದ ಸಂಸದರನ್ನು ಸಹ ಬಂಧಿಸಲಾಗಿದೆ.
ಮತ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸಂಸದರು ಚುನಾವಣಾ ಆಯೋಗದ ಕಚೇರಿಯತ್ತ ಮೆರವಣಿಗೆ ನಡೆಸಿದರು. ಪೊಲೀಸರು ಮೆರವಣಿಗೆ ತಡೆದಾಗ, ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಆದರೆ, ರಾಹುಲ್ ಗಾಂಧಿ, ಡಿಎಂಕೆ ಸಂಸದೆ ಕನಿಮೊಳಿ ಸೇರಿದಂತೆ ಹಲವರು ಪೊಲೀಸರ ತಡೆಗಳನ್ನು ಮೀರಿ ಮೆರವಣಿಗೆ ಮುಂದುವರಿಸಲು ಪ್ರಯತ್ನಿಸಿದರು. ಈವೇಳೆ, ರಾಹುಲ್, ಪ್ರಿಯಾಂಕಾ, ಕನಿಮೊಳಿ ಸೇರಿದಂತೆ ವಿರೋಧ ಪಕ್ಷದ ಸಂಸದರನ್ನು ಪೊಲೀಸರು ಬಂಧಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


