ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹುತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇದೀಗ ಇಂದು ಧರ್ಮಸ್ಥಳಕ್ಕೆ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಲಿದೆ. ಪ್ರಕರಣದ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ ಆಯೋಗ ಮಾಹಿತಿ ಪಡೆಯಲಿದೆ.
ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಇಂದು ಭೇಟಿ ನೀಡಲಿದೆ. ಪ್ರಕರಣದ ಬಗ್ಗೆ ಇಂದು ಸಂಪೂರ್ಣ ಮಾಹಿತಿ ಕಲೆ ಹಾಕಲಿದೆ. ಅಸ್ಥಿಪಂಜರ ಹಾಗೂ ಮೂಳೆಗಳು ಪತ್ತೆಯಾದ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ.
ಇದೀಗ 12ನೇ ದಿನವೂ ಶೋಧಕಾರ್ಯ ನಡೆಯಲಿದೆ. ಧರ್ಮಸ್ಥಳದಲ್ಲಿ ಅಸ್ತಿ ಪಂಜರ ಶೋಧ ಕೇಸ್ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ರತ್ನಗಿರಿ ಬಳಿಕ ಇಂದು ಕನ್ಯಾಡಿಯಲ್ಲಿ ಶೋಧ ಕಾರ್ಯ, ನಡೆಸಲಾಗುತ್ತದೆ ಕನ್ಯಾಡಿಯಲ್ಲಿ ಖಾಸಗಿ ಸ್ಥಳವನ್ನು ತೋರಿಸುವ ಸಾಧ್ಯತೆ ಇದೆ. ಹೀಗಾಗಿ ತೀವ್ರ ಕುತೂಹಲ ಕೆರಳಿಸಿದೆ. ಧರ್ಮಸ್ಥಳದಲ್ಲಿ ಖಾಸಗಿ ವ್ಯಕ್ತಿಗೆ ಸೇರಿದ ಜಾಗದಲ್ಲಿ ಇಂದು ಸಹ ಶೋಧ ನಡೆಸಲಾಗುತ್ತದೆ. ಮಾಸ್ಕ್ ಮ್ಯಾನ್ ಹೇಳಿದಂತೆ ಸ್ಥಳ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ಮಾಡಲು ಮುಂದಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


