ಹನೂರು: 15 ವರ್ಷಗಳಲ್ಲಿ ಆಗದೆ ಇರುವ ಅಭಿವೃದ್ಧಿ ಕಾಮಗಾರಿಗಳು ಎರಡೂವರೆ ವರ್ಷ ಗಳಲ್ಲಿ ಆಗುತ್ತಿರುವುದನ್ನು ಹಾಗೂ ಶಾಸಕರ ಕಾರ್ಯ ವೈಖರಿಯನ್ನು ಮೆಚ್ಚಿ ಬಿಜೆಪಿ ತೊರೆದು ಜಾದಳವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಪೆದ್ದನಪಾಳ್ಯ ಗ್ರಾಮದ ಮುಖಂಡ ಮುರುಗೇಶ್ ತಿಳಿಸಿದರು.
ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಜಾ.ದಳ ಪಕ್ಷ ಸೇರ್ಪಡೆ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷಗಳಿಂದ ಅಭಿವೃದ್ಧಿಯ ಪರ್ವವೇ ನಡೆಯುತ್ತಿದೆ. ಶಾಸಕರಾದ ಎಂ.ಆರ್.ಮಂಜು ನಾಥ್‌ರವರು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಮತ್ತು ಕೆರೆ-ನಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದಲ್ಲದೆ ಪ್ರತಿಯೊಂದು ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿಯೊಬ್ಬರ ಸಮಸ್ಯೆಗಳಿಗೂ ಸ್ಪಂದಿಸುವ ಮನೋಭಾವನೆ ಹೊಂದಿರುವುದನ್ನು ಗಮನಿಸಿ, ಅವರ ಆಡಳಿತವನ್ನು ಮೆಚ್ಚಿ ಪಕ್ಷಸೇರ್ಪಡೆಯಾಗುತ್ತಿದ್ದೇವೆ ಎಂದು ತಿಳಿಸಿದರು.
ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, 15 ವರ್ಷಗಳಿಂದ ಆಗದೇ ಇರುವ ಹಲವಾರು ಅಭಿವೃದ್ಧಿ ಕಾರ್ಯಗಳು ನನ್ನ ಅವಧಿಯಲ್ಲಿ ಆಗುತ್ತಿರುವುದು ಸಂತಸದ ವಿಚಾರ. ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದಿದ್ದರೂ ಮ.ಬೆಟ್ಟ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕವಿರಲಿಲ್ಲ. ಇದೀಗ ವಿದ್ಯುತ್ ಸಂಪರ್ಕ ದೊರೆಯುತ್ತಿರುವುದು ಹೆಮ್ಮೆಯ ವಿಚಾರ, 20 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಲವು ಗ್ರಾಮಗಳ ಪ್ರಮುಖ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ಆರ್ ಅಶೋಕ್ ಕುರ್ಚಿಗೆ ಕುತ್ತು ಬಂದಿದೆ: ಶಾಸಕ ಪ್ರದೀಪ್ ಈಶ್ವರ್ ಲೇವಡಿ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


