ಕೊಪ್ಪಳ: ಹಿಂದು ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ 5 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದಾರೆ.
ಇತ್ತೀಚೆಗೆ ನಗರದಲ್ಲಿ ಕೊಲೆಯಾದ ಗವಿ ನಾಯಕ ಮನೆಗೆ ಭೇಟಿ ನೀಡಿದ ನಂತರ ಮಾತನಾಡಿ, ಮುಂದಿನ ದಿನಗಳಲ್ಲಿ ಈ ಕುರಿತು ಅಭಿಯಾನ ಪ್ರಾರಂಭಿಸುವುದಾಗಿ ತಿಳಿಸಿದರು. ಮುಸ್ಲಿಂ ಯುವತಿಯನ್ನು ಲವ್ ಮಾಡಿದ್ದಕ್ಕೆ ಹಿಂದು ಯುವಕನನ್ನು ಮಸೀದಿ ಮುಂದೆ ಹತ್ಯೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಬೇಕು, ಯುವಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಕಲಾಸಿಪಾಳ್ಯನಲ್ಲಿ ಸ್ಫೋಟಕ ಪತ್ತೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


