Wednesday, September 2, 2026
spot_img
More
    spot_img
    HomeLatest newsರಾಜ್ಯದಲ್ಲಿ ತ್ರಿಭಾಷಾ ಸೂತ್ರವೇ ಇರಲಿ; ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಒತ್ತಾಯ

    ರಾಜ್ಯದಲ್ಲಿ ತ್ರಿಭಾಷಾ ಸೂತ್ರವೇ ಇರಲಿ; ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಒತ್ತಾಯ

    ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರದ ಅಳವಡಿಕೆಯ ಪ್ರಸ್ತಾಪ ಕೇಳಿಬರುತ್ತಿರುವುದನ್ನು ಪರಿಗಣಿಸದೆ ಪ್ರಸ್ತುತ ಇರುವ ತ್ರಿಭಾಷಾ ಸೂತ್ರವನ್ನು ಮುಂದುವರಿಸಬೇಕು ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘವು ಒತ್ತಾಯಿಸಿದೆ.

    Advertisement

    ಭಾನುವಾರ ಶಿಕ್ಷಕರ ಸದನದಲ್ಲಿ ನಡೆದ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ 2024ನೇ ಸಾಲಿನ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ಸರ್ವಸದಸ್ಯರ ಮಹಾಸಭೆಯಲ್ಲಿ ಒಕ್ಕೊರಲ ಅಭಿಪ್ರಾಯವನ್ನು ಮಂಡಿಸಿತು.

    ಪ್ರಸ್ತುತ ರಾಜ್ಯದಲ್ಲಿ 4,871 ಸರ್ಕಾರಿ ಪ್ರೌಢಶಾಲೆಗಳಲ್ಲಿ ಮಂಜೂರಾಗಿರುವ 5,060 ಹುದ್ದೆಗಳಲ್ಲಿ 3,532 ಹುದ್ದೆ ಮಾತ್ರ ಭರ್ತಿಯಾಗಿವೆ.3,667 ಅನುದಾನಿತ ಪ್ರೌಢಶಾಲೆಗಳಲ್ಲಿ ಸುಮಾರು 2 ಸಾವಿರ ಹಿಂದಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ, ತ್ರಿಭಾಷಾ ಸೂತ್ರವನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.

    ಸ್ನಾತಕೋತ್ತರ ಪದವೀಧರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪಿಯು ಕಾಲೇಜುಗಳಿಗೆ ಉಪನ್ಯಾಸಕರಾಗಿ ಬಡ್ತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಬಡ್ತಿನೀಡಲುಪರೀಕ್ಷೆನಡೆಸುವು ದಾಗಿ ತಿಳಿಸಿದೆ. ಯಾವುದೇ ಇಲಾಖೆಗೆ ಬಡ್ತಿ ನೀಡಲು ಇಲ್ಲದ ಪರೀಕ್ಷೆ ನಮಗೇಕೆ? ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪ್ರೌಢಶಾಲೆ ಬಡ್ತಿ ನೀಡಲು ಇಲ್ಲದ ನಿಯಮ ನಮಗೇಕೆ ಎಂದು ಸಂಘದ ಅಧ್ಯಕ್ಷ ಸಿದ್ದಬಸಪ್ಪ ಪ್ರಶ್ನಿಸಿದರು.

    ನಂಜನಗೂಡಿನಲ್ಲಿ ಪುಡಿ ರೌಡಿಗಳ ಸದ್ದು; ಸರ್ಕಾರಿ ಆಸ್ಪತ್ರೆ ಮುಂಭಾಗ ರಣರಂಗ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading