ಬೆಳ್ತಂಗಡಿ: ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯೂಟ್ಯೂಬರ್‌ಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.
ಕುಡ್ಲ ರಂಪೇಜ್‌ನ ಯೂಟ್ಯೂಬರ್ ಹಾಗೂ ಇನ್ನಿಬ್ಬರು ಆರೋಪಿಗಳು. ಆ.6ರ ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ರಸ್ತೆ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಹರೀಶ್ ನಾಯ್ಕ ಎಂಬುವರನ್ನು ಮೂವರೂ ನಿಲ್ಲಿಸುವಂತೆ ಸೂಚಿಸಿದ್ದರು.
ಹರೀಶ್ ನಾಯ್ಕ ಬೈಕ್ ನಿಲ್ಲಿಸಿದಾಗ ಕುಡ್ಲ ರಂಪೇಜ್ ಯೂಟ್ಯೂಬರ್, ನೀವು ಪಾಂಗಳ ರಸ್ತೆಯ ಅಕ್ಕಪಕ್ಕದಲ್ಲಿ ಹೆಣಗಳನ್ನು ಹೂತಿದ್ದಿರಾ? ನಿಮಗೆ ಗೊತ್ತಿದೆಯಾ ಎಂದು ಪ್ರಶ್ನಿಸಿದ್ದಾನೆ.
ಗೊತ್ತಿಲ್ಲ ಎಂದು ಉತ್ತರಿಸಿದಾಗ ಮೂವರೂ ಅವಾಚ್ಯ ಶಬ್ದಗಳಿಂದ ಬೈದು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಹರೀಶ್ ನಾಯ್ಕ ದೂರು ನೀಡಿದ್ದಾರೆ.
ಕಲಾಸಿಪಾಳ್ಯನಲ್ಲಿ ಸ್ಫೋಟಕ ಪತ್ತೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


