Monday, August 31, 2026
spot_img
More
    spot_img
    HomeLatest newsಕಲಾಸಿಪಾಳ್ಯನಲ್ಲಿ ಸ್ಫೋಟಕ ಪತ್ತೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

    ಕಲಾಸಿಪಾಳ್ಯನಲ್ಲಿ ಸ್ಫೋಟಕ ಪತ್ತೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

    ಬೆಂಗಳೂರು: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಹಾಗೂ ಡಿಟೊನೇಟರ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    Advertisement

    ಆರೋಪಿಗಳು ಕಲ್ಲು ಗಣಿಗಾರಿಕೆ ಮತ್ತು ಬೋರ್‌ವೆಲ್ ಕೆಲಸಗಳಿಗಾಗಿ ರಾಜ್ಯದ ವಿವಿಧ ಭಾಗಗಳಿಗೆ ಹೆಚ್ಚಿನ ಬೆಲೆಗೆ ಸ್ಫೋಟಕಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

    ಈ ಹಿಂದೆ ಅನೇಕ ಸ್ಥಳಗಳಲ್ಲಿ ಜಿಲಟಿನ್ ಸ್ಟಿಕ್‌ಗಳು ಮತ್ತು ಡಿಟೋನೇಟರ್‌ಗಳನ್ನು ಮಾರಾಟ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಜುಲೈ 23ರಂದು ಮಧ್ಯಾಹ್ನ ಕಲಾಸಿಪಾಳ್ಯದ ಶೌಚಾಲಯದ ಬಳಿ ಜಿಲೆಟಿನ್, ಡಿಟೊನೇಟರ್ ಪತ್ತೆಯಾಗಿದ್ದವು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಗಣೇಶ್, ಶಿವ ಮುನಿಯಪ ಎಂಬವರನ್ನು ಬಂಧಿಸಿದ್ದರು, ಇದರೊಂದಿಗೆ ಪ್ರಕರಣ ಸಂಬಂಧ ಒಟ್ಟು ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

    ಆರೋಪಿಗಳ ವಿರುದ್ದ ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರ್ ಅಶೋಕ್‌ ಕುರ್ಚಿಗೆ ಕುತ್ತು ಬಂದಿದೆ: ಶಾಸಕ ಪ್ರದೀಪ್‌ ಈಶ್ವರ್‌ ಲೇವಡಿ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading