Wednesday, September 2, 2026
spot_img
More
    spot_img
    HomeStateDistrictನಂಜನಗೂಡಿನಲ್ಲಿ ಪುಡಿ ರೌಡಿಗಳ ಸದ್ದು; ಸರ್ಕಾರಿ ಆಸ್ಪತ್ರೆ ಮುಂಭಾಗ ರಣರಂಗ

    ನಂಜನಗೂಡಿನಲ್ಲಿ ಪುಡಿ ರೌಡಿಗಳ ಸದ್ದು; ಸರ್ಕಾರಿ ಆಸ್ಪತ್ರೆ ಮುಂಭಾಗ ರಣರಂಗ

    ನಂಜನಗೂಡು: ನಾಲ್ವರು ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ ಅಭಿಲಾಷ್‌ ಹಾಗೂ ರವಿ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ನಡೆದಿದೆ.

    Advertisement

    ಹಲ್ಲೆ ನಡೆಸಿರುವ ನಂಜನಗೂಡಿನ ಸುಭಾಷ್‌, ಆಕಾಶ, ಸತ್ಯ ಎಂಬುವವರ ಮೇಲೆ ನಂಜನಗೂಡು ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹಲ್ಲೆಗೊಳಗಾದ ಅಭಿಷೇಕ್ ನಂಜನಗೂಡಿನ ಶ್ರೀರಾಂಪುರದ ಯುವತಿಯನ್ನ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದ. ಪತ್ನಿಯ ದೊಡ್ಡಮ್ಮನ ಮಗ ಶಿವಕುಮಾರ್‌ಗೆ ಸುಭಾಷ್, ಆಕಾಶ್, ಸತ್ಯ ಎಂಬುವವರು ಕಪಿ ಕಪಿ ಎಂದು ಛೇಡಿಸುತ್ತಿದ್ದರು. ಈ ಬಗ್ಗೆ ಶಿವಕುಮಾರ್ ತಾಯಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮೂವರು ಶಶಿಕುಮಾರ್ ಮೇಲೆ ದ್ವೇಷ ಬೆಳೆಸಿಕೊಂಡಿದ್ದರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಅಭಿಷೇಕ್ ಪತ್ನಿ ಮನೆಗೆ ಬಂದಾಗ ಶಶಿಕುಮಾರ್ ಅವರ ಅಣ್ಣನನ್ನು ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆಗಾಗಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು.

    ಇದೇ ವೇಳೆ ಹೊಂಚು ಹಾಕಿದ ಸುಭಾಷ್ ತಂಡ ಪ್ಯಾಸೆಂಜರ್ ಆಟೋದಲ್ಲಿ ಮಾರಕಾಸ್ತ್ರಗಳ ಸಮೇತ ಬಂದು ಲಾಂಗ್‌ಗಳನ್ನ ಹಿಡಿದು ಭೀತಿ ಸೃಷ್ಟಿಸಿ ಅಭಿಷೇಕ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಿಡಿಸಲು ಬಂದ ಶಶಿಕುಮಾರ್ ಅಣ್ಣ ರವಿ ಮೇಲೂ ಅಟ್ಯಾಕ್ ಮಾಡಿದ್ದಾರೆ. ಚಾಕು, ಕಬ್ಬಿಣದ ರಾಡ್, ರಿಪೀಸ್ ಪಟ್ಟಿಗಳಿಂದ ಹಲ್ಲೆ ನಡೆಸಿ ರಣರಂಗ ಸೃಷ್ಟಿಮಾಡಿದ್ದಾರೆ. ಇವರಿಂದ ಅಭಿಷೇಕ್ ತಪ್ಪಿಸಿಕೊಂಡು ಓಡಿದ್ರೂ ಚೇಸ್ ಮಾಡಿದ ಆರೋಪಿಗಳು ಹಟ್ಟಿಮಾರಮ್ಮನ ದೇವಸ್ಥಾನದ ಬಳಿ ಹಿಡಿದು ಮತ್ತೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಅಭಿಷೇಕ್ ಹಾಗೂ ರವಿ ಎಂಬುವವರನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ.

    ಆರ್ ಅಶೋಕ್‌ ಕುರ್ಚಿಗೆ ಕುತ್ತು ಬಂದಿದೆ: ಶಾಸಕ ಪ್ರದೀಪ್‌ ಈಶ್ವರ್‌ ಲೇವಡಿ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading