ಬೆಂಗಳೂರು: ಅಭಿಮಾನಿಗಳ ಆಸೆಯಂತೆ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಸಚಿವ ಎಚ್. ಕೆ ಪಾಟೀಲ್ ಈ ಕುರಿತು ಘೋಷಣೆ ಮಾಡಿದ್ದು, ವಿಷ್ಣುವರ್ಧನ್ ಜತೆಗೆ ದಿವಂಗತ ನಟಿ ಬಿ. ಸರೋಜಾದೇವಿ ಅವರಿಗೂ ಸಹ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಇನ್ನು ವಿಷ್ಣುವರ್ಧನ್ ಹಾಗೂ ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ನಟಿಯರಾದ ಶೃತಿ, ಜಯಮಾಲಾ ಹಾಗೂ ಮಾಳವಿಕ ಅವಿನಾಶ್ ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿದ ಬಳಿಕ ರಾಜ್ಯ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


