Monday, August 31, 2026
spot_img
More
    spot_img
    HomeLatest newsರಾಜ್ಯಾದ್ಯಂತ ಮಳೆ ಮುಂದುವರೆಯುವ ಸಾಧ್ಯತೆ; ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್‌

    ರಾಜ್ಯಾದ್ಯಂತ ಮಳೆ ಮುಂದುವರೆಯುವ ಸಾಧ್ಯತೆ; ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್‌

    ರಾಜ್ಯದಲ್ಲಿ ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಆರ್ಭಟಿಸುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ.

    Advertisement

    ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ ಮತ್ತು ವಿಜಯಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

    ಸೆಪ್ಟೆಂಬರ್ 12 ಮತ್ತು 13ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಎರಡೂ ದಿನಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.

    ಭಾರೀ ಮಳೆ ನಿರೀಕ್ಷೆ: ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

    ಹಗುರದಿಂದ ಸಾಧಾರಣ ಮಳೆ: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗಲಿದೆ.

    ಬೆಂಗಳೂರಿನಲ್ಲಿ ಭಾರೀ ಮಳೆ: ರಸ್ತೆಗಳಲ್ಲಿ ನೀರು, ವಾಹನ ಸಂಚಾರ ಅಸ್ತವ್ಯಸ್ತ

    ಬುಧವಾರ ರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದವು. ಕಚೇರಿಗಳಿಂದ ಮನೆಗೆ ಹಿಂದಿರುಗುತ್ತಿದ್ದ ವಾಹನ ಸವಾರರು ಮತ್ತು ಪಾದಚಾರಿಗಳು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಪರದಾಡಿದರು. ನಗರದ ಬಹುತೇಕ ರಾಜಮಾರ್ಗಗಳಲ್ಲಿ ನೀರುಗಾಲುವೆಗಳಲ್ಲಿ ಕಸ ತುಂಬಿಕೊಂಡ ಕಾರಣ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ಹರಿಯಿತು.

    ಮೆಜೆಸ್ಟಿಕ್‌, ವಿಧಾನಸೌಧ, ಸದಾಶಿವನಗರ, ಶಾಂತಿನಗರ, ಚಾಮರಾಜಪೇಟೆ, ಶೇಷಾದ್ರಿಪುರ, ಅರಮನೆ ರಸ್ತೆ, ಬಳ್ಳಾರಿ ರಸ್ತೆ, ಹೆಬ್ಬಾಳ, ಹೊಸೂರು ರಸ್ತೆ, ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಂಡುಬಂತು.ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ಬಳಿ ಮರ ಬಿದ್ದ ಪರಿಣಾಮ ಮಾಗಡಿ ರಸ್ತೆಯಲ್ಲಿ ಸುಮನಹಳ್ಳಿ ಕಡೆಗೆ ವಾಹನ ದಟ್ಟಣೆ ಉಂಟಾಯಿತು.ಹಲವು ಅಂಡರ್‌ಪಾಸ್‌ಗಳು ಮತ್ತು ಫ್ಲೈಓವರ್‌ಗಳ ಮೇಲೆ ಕೂಡ ನೀರು ನಿಂತಿತ್ತು.

    3.65 ಲಕ್ಷ ಕಾರ್ಡ್ ರದ್ದು; ಅರ್ಹ ಬಡವರಿಗೆ ಬಿಪಿಎಲ್ ಕಾರ್ಡ್ ನೀಡಲು ಸಿಎಂ ಸೂಚನೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading