ಬೆಂಗಳೂರು: ಕೇರಳದ ವಯನಾಡಿಗೆ ನೆರವಾಗಲು ಮುಂದಾಗುತ್ತಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಕೇರಳಕ್ಕೆ ಉಪಕಾರಿ ಕರ್ನಾಟಕಕ್ಕೆ ಮಾರಿ ಎಂದು ಗುಡುಗಿದ್ದಾರೆ.
ಈ ಬಗೆ ಟ್ವೀಟ್ ಮಾಡಿರುವ ಆರ್. ಅಶೋಕ್, ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ. ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ಕಾಂಗ್ರೆಸ್ಸರ್ಕಾರ ಎಂದಿದ್ದಾರೆ.
ಭೂಕುಸಿತದ ಘಟನೆಯ ನಂತರ ನಾನು ವಯನಾಡಿಗೆ ಭೇಟಿ ನೀಡಿದಾಗ, ಸಂತ್ರಸ್ತ ಕುಟುಂಬಗಳಿಗೆ 100 ಮನೆಗಳನ್ನು ಕಟ್ಟಿಸಿಕೊಡುವುದಾಗಿ ನಮ್ಮ ಸರ್ಕಾರದ ಬದ್ಧತೆಯನ್ನು ನಾನು ಘೋಷಿಸಿದ್ದೇನೆ ಎಂದು ದಯವಿಟ್ಟು ನೆನಪಿಸಿಕೊಳ್ಳಿ. ಈ ಉಪಕ್ರಮವು ತಮ್ಮ ಮನೆಗಳು, ಜೀವನೋಪಾಯಗಳು ಮತ್ತು ಆತ್ಮೀಯರನ್ನು ಕಳೆದುಕೊಂಡವರಿಗೆ ಸುರಕ್ಷಿತ ಹಾಗೂ ಸ್ಥಿರವಾದ ವಾತಾವರಣವನ್ನು ಒದಗಿಸುವ ಉದ್ದೇಶವಾಗಿದೆ.
ಈ ಯೋಜನೆಯನ್ನು ಕಾರ್ಯಗತಗೊಳಿಸಲು ಅಗತ್ಯವಾದ ಮಾರ್ಗಸೂಚಿಗಳು ಅಥವಾ ನಿರ್ದೇಶನಗಳ ಬಗ್ಗೆ ಕೇರಳ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಉಪಕ್ರಮವನ್ನು ಸುಲಭಗೊಳಿಸಲು, ಸಂತ್ರಸ್ತ ಕುಟುಂಬಗಳಿಗೆ ಪರಿಹಾರವನ್ನು ಒದಗಿಸುವಲ್ಲಿ ತ್ವರಿತ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು, ಮನೆಗಳನ್ನು ನಿರ್ಮಿಸಲು ಅಗತ್ಯವಿರುವ ಭೂಮಿಯನ್ನು ಖರೀದಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಲು ಬಯಸುವುದಾಗಿ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


