ಮೈಸೂರು: ಮೈಸೂರು- ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿ ಅವರಿಂದು ತಮ್ಮ ಕಿರಿಯ ಪುತ್ರನಿಗೆ ಚಾಮುಂಡಿ ಬೆಟ್ಟದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿಸಿದ್ದಾರೆ.
ಈ ಬಾರಿಯ ಮೈಸೂರು ದಸರಾ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಎರಡನೇ ಮಗುವಿನ ಜನನವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ದಂಪತಿ ತೊಟ್ಟಿಲು ಶಾಸ್ತ್ರ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದ್ದಾರೆ.
ಚಾಮುಂಡೇಶ್ವರಿ ದೇವಿಗೆ ಪೂಜೆ ಕಾರ್ಯಕ್ರಮಗಳು ಮುಗಿದ ಬಳಿಕ ದೇವಾಲಯದ ಆವರಣದಲ್ಲಿರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಪೂಜೆ ಸಲ್ಲಿಸಿದ್ದಾರೆ. ಆ ನಂತರ ತಮ್ಮ ಎರಡನೇ ಮಗನನ್ನು ತೊಟ್ಟಿಲಿಗೆ ಹಾಕಿ ತೊಟ್ಟಿಲು ಶಾಸ್ತ್ರವನ್ನು ಸಹ ನೆರವೇರಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ವೇಳೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಸೇರಿದಂತೆ ರಾಜ ಪರಿವಾರದ ಹಲವರು ಭಾಗಿಯಾಗಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


