Tuesday, September 1, 2026
spot_img
More
    spot_img
    HomeTop Storyಮತ್ತೆ ಚಂಡಮಾರುತ: ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

    ಮತ್ತೆ ಚಂಡಮಾರುತ: ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ.

    Advertisement

    ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

    ಬೆಂಗಳೂರು ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

    ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗರು ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.

    ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading