ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದು, ಈ ಹೋರಾಟದ ವೇಳೆ ಕಲ್ಲು ತೂರಾಟ ನಡೆದಿದೆ. ಈ ಗಲಭೆಯಲ್ಲಿ ಪಾಲ್ಗೊಂಡವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರನ್ನು ದಾಖಲಿಸಿದ್ದಾರೆ.
ಇಂದು ( ಡಿಸೆಂಬರ್ 11 ) ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಜೊತೆಗೆ ಸರ್ಕಾರಿ ಬಸ್, ಪೊಲೀಸ್ ವಾಹನಗಳು ಸಹ ಜಖಂಗೊಂಡ ಹಿನ್ನೆಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲ್ಲು ಎಸೆದ ನಿಂಗಪ್ಪ ಬಣದ್, ಉಮೇಶ್ ಇಂಗಳೆವಾರ್, ರಾಮಗೌಡ ಫಕೀರಗೌಡ, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಜೊತೆಗೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 352, 351(2) 132,121,223,324,184,189(3), 192(2), 190 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


