Tuesday, September 1, 2026
spot_img
More
    spot_img
    HomeTop Storyಎಸ್‌ಎಂಕೆಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು; ಆರ್‌ ಅಶೋಕ್‌ ಮನವಿ

    ಎಸ್‌ಎಂಕೆಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು; ಆರ್‌ ಅಶೋಕ್‌ ಮನವಿ

    ಬೆಂಗಳೂರು: ರಾಜ್ಯ ಸರ್ಕಾರ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಮನವಿ ಮಾಡಿದ್ದಾರೆ.

    Advertisement

    ಈ ಬಗ್ಗೆ ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಎಸ್‌.ಎಂ.ಕೃಷ್ಣ ಅವರು ಶಾಸಕ, ಸಚಿವ, ಸ್ಪೀಕರ್‌, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯವಾಗಿದೆ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

    ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಎಸ್‌.ಎಂ.ಕೃಷ್ಣ ಅವರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading