ಬೆಂಗಳೂರು: ಶೈಕ್ಷಣಿಕ ಪ್ರವಾಸದ ವೇಳೆ ಮೃತಪಟ್ಟಿರುವ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದರು.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರುಮಕ್ಕಳ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು-ಸಂಕಟವನ್ನು ನಾನು ಅರ್ಥೈಸಿಕೊಳ್ಳಲು ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


