Saturday, August 8, 2026
spot_img
More
    spot_img
    HomeLatest newsದೇಶದಲ್ಲಿ ಶೇಕಡಾ.7ರಷ್ಟು ಭಾರತೀಯರು ಮಾದಕ ವ್ಯಸನಿಗಳು: ಅಮಿತ್‌ ಶಾ ಮಾಹಿತಿ

    ದೇಶದಲ್ಲಿ ಶೇಕಡಾ.7ರಷ್ಟು ಭಾರತೀಯರು ಮಾದಕ ವ್ಯಸನಿಗಳು: ಅಮಿತ್‌ ಶಾ ಮಾಹಿತಿ

    ನವದೆಹಲಿ: ದೇಶದ ಜನಸಂಖ್ಯೆಯ ಶೇಕಡಾ.7 ರಷ್ಟು ಜನರು ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ.

    Advertisement

    ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾದಕ ವಸ್ತು ಕಾನೂನು ಜಾರಿ ಏಜೆನ್ಸಿಗಳು ಮತ್ತು ಸಮಾಜ ಈ ಸವಾಲನ್ನು ಸಮರ್ಥವಾಗಿ ಎದುರಿಸಬೇಕು ಎಂದು ಕರೆ ನೀಡಿರುವ ಅವರು, ಈ ಪಿಡುಗನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

    ಶೇಕಡಾ.7ರಷ್ಟು ಭಾರತೀಯರು ಮಾದಕ ವಸ್ತುಗಳನ್ನು ಕಾನೂನು ಬಾಹಿರವಾಗಿ ಬಳಸುತ್ತಾರೆ. ಮಾದಕ ವಸ್ತುಗಳ ಬಳಕೆ ದೇಶದ ಪೀಳಿಗೆಗಳನ್ನೇ ನಾಶಪಡಿಸುವ ಕ್ಯಾನ್ಸರ್‌ ಎನಿಸಿದೆ. ನಾವು ಅದನ್ನು ಸೋಲಿಸಬೇಕು. ಈ ಹೋರಾಟಕ್ಕೆ ಕೊಡುಗೆ ನೀಡಲು ಮತ್ತು ಗೆಲ್ಲಲು ಇದು ಸಕಾಲ. ಇಂದು ಈ ಅವಕಾಶವನ್ನು ತಪ್ಪಿಸಿಕೊಂಡರೆ, ಬಳಿಕ ಅದನ್ನು ಬಗೆಹರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

    2024ರಲ್ಲಿ ಒಟ್ಟು 16,914 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಸ್ವತಂತ್ರ ಭಾರತದಲ್ಲಿ ಒಂದು ವರ್ಷದ ಅವಧಿಯಲ್ಲಿ ವಶಪಡಿಸಿಕೊಂಡ ಅತ್ಯಧಿಕ ಮೌಲ್ಯವಾಗಿದೆ ಎಂದು ಮಾಹಿತಿ ನೀಡಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಮಾದಕ ವಸ್ತು ದಂಧೆಯನ್ನು ನಿರ್ಮೂಲನೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದ ಮಾಹಿತಿಯನ್ನು ಇದು ಸಮಾಜಕ್ಕೆ ರವಾನಿಸಲಿದೆ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading