Friday, August 7, 2026
spot_img
More
    spot_img
    HomeSportsCricketIPL 2025: ಆರಂಭದಲ್ಲಿ ಅಬ್ಬರಿಸಿ ನಂತರ ಬಿದ್ದ ಗುಜರಾತ್; ಲಕ್ನೋಗೆ ಸವಾಲಿನ ಗುರಿ

    IPL 2025: ಆರಂಭದಲ್ಲಿ ಅಬ್ಬರಿಸಿ ನಂತರ ಬಿದ್ದ ಗುಜರಾತ್; ಲಕ್ನೋಗೆ ಸವಾಲಿನ ಗುರಿ

    ಲಕ್ನೋ; ಏಕನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ 26ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

    Advertisement

    ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಫೀಲ್ಡಿಂಗ್‌ ಆರಿಸಿಕೊಂಡು ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಗುಜರಾತ್ ಟೈಟನ್ಸ್ ಆರಂಭಿಕರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿ ಗುಜರಾತ್ ಟೈಟನ್ಸ್‌ಗೆ 181 ರನ್‌ಗಳ ಗುರಿಯನ್ನು ನೀಡಿದೆ.

    ಗುಜರಾತ್ ಟೈಟನ್ಸ್ ಪರ ಆರಂಭಿಕ ಆಟಗಾರರಾಗಿ ನಾಯಕ ಶುಭ್‌ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಕಣಕ್ಕಿಳಿದರು. ಸಾಯಿ ಸುದರ್ಶನ್ 37 ಎಸೆತಗಳಲ್ಲಿ 7 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 56 ರನ್ ಬಾರಿಸಿದರೆ, ಗಿಲ್ 38 ಎಸೆತಗಳಲ್ಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 60 ರನ್ ಬಾರಿಸಿದ್ದಾರೆ. ಈ ಇಬ್ಬರ ವಿಕೆಟ್ ಬಿದ್ದ ಬಳಿಕ ಸಾಲು ಸಾಲಾಗಿ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. 12 ಓವರ್‌ವರೆಗೂ ಯಾವುದೇ ವಿಕೆಟ್ ಕಳೆದುಕೊಳ್ಳದೇ ಇದ್ದ ತಂಡ ಕೊನೆಯ 8 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡಿತು. ಜೋಸ್ ಬಟ್ಲರ್ 16 (14), ವಾಷಿಂಗ್ಟನ್ ಸುಂದರ್ 2 (3), ಶೆರ್ಫೆನ್ ರುದರ್‌ಫೋರ್ಡ್ 22 (19), ರಾಹುಲ್ ತೆವಾಟಿಯಾ ಡಕ್‌ಔಟ್, ರಶೀದ್ ಖಾನ್ ಅಜೇಯ 4 (2) ರನ್ ಹಾಗೂ ಶಾರುಖ್ ಖಾನ್ ಅಜೇಯ 11 (6) ರನ್ ಗಳಿಸಿದರು.

    ಲಕ್ನೋ ಸೂಪರ್ ಜೈಂಟ್ಸ್ ಪರ ಶಾರ್ದೂಲ್ ಠಾಕೂರ್ ಹಾಗೂ ರವಿ ಬಿಷ್ಣೋಯಿ ತಲಾ ಎರಡೆರಡು ವಿಕೆಟ್ ಮತ್ತು ದಿಗ್ವೇಶ್ ರಾಠಿ ಹಾಗೂ ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading