ಮಾರ್ಚ್ 22ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 25 ಪಂದ್ಯಗಳು ಮುಕ್ತಾಯವಾಗಿದೆ.
ನಿನ್ನೆ ( ಏಪ್ರಿಲ್ 11) ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 25ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸಿಎಸ್‌ಕೆ ಕೆಕೆಆರ್ ವಿರುದ್ಧ ಹೀನಾಯ ಸೋಲನ್ನು ಕಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲಲ್ಲಿ 9 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ 104 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ 10.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 107 ರನ್ ಕಲೆಹಾಕಿತು.
ಈ ಸೋಲಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಸತತ ಐದು ಸೋಲುಗಳನ್ನು ಕಂಡು ಪ್ಲೇಆಫ್ ಪ್ರವೇಶಿಸಲು ಇರುವ ಅವಕಾಶವನ್ನು ಮತ್ತಷ್ಟು ಕಡಿಮೆ ಮಾಡಿಕೊಂಡಿದೆ. ಸದ್ಯ 25 ಪಂದ್ಯಗಳ ಮುಕ್ತಾಯದ ಬಳಿಕ ಯಾವ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಎಷ್ಟಿದೆ ಎಂಬ ಮಾಹಿತಿ ಕೆಳಕಂಡಂತಿದೆ..
ಡೆಲ್ಲಿ ಕ್ಯಾಪಿಟಲ್ಸ್ – 75%
ಗುಜರಾತ್ ಟೈಟನ್ಸ್ – 74%
ಕೊಲ್ಕತ್ತಾ ನೈಟ್ ರೈಡರ್ಸ್ – 55%
ಪಂಜಾಬ್ ಕಿಂಗ್ಸ್ – 52%
ರಾಯಲ್ ಚಾಲೆಂಜರ್ಸ್ ಬೆಂಗಳೂರು – 50%
ಲಕ್ನೋ ಸೂಪರ್ ಜೈಂಟ್ಸ್ – 47%
ರಾಜಸ್ಥಾನ್ ರಾಯಲ್ಸ್ – 26%
ಮುಂಬೈ ಇಂಡಿಯನ್ಸ್ – 11%
ಚೆನ್ನೈ ಸೂಪರ್ ಕಿಂಗ್ಸ್ – 6%
ಸನ್‌ರೈಸರ್ಸ್ ಹೈದರಾಬಾದ್ – 4%
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


