Tuesday, August 4, 2026
spot_img
More
    spot_img
    HomeBreaking NewsBREAKING: ಬಿಗ್ ಬಾಸ್ ಸ್ಪರ್ಧಿ ‘ಚಂದನ್ ಶೆಟ್ಟಿ-ನಿವೇದಿತಾ’ ದಾಂಪತ್ಯ ಜೀವನದಲ್ಲಿ ಬಿರುಕು: ‘ವಿಚ್ಚೇದನ’ಕ್ಕಾಗಿ ಅರ್ಜಿ ಸಲ್ಲಿಕೆ

    BREAKING: ಬಿಗ್ ಬಾಸ್ ಸ್ಪರ್ಧಿ ‘ಚಂದನ್ ಶೆಟ್ಟಿ-ನಿವೇದಿತಾ’ ದಾಂಪತ್ಯ ಜೀವನದಲ್ಲಿ ಬಿರುಕು: ‘ವಿಚ್ಚೇದನ’ಕ್ಕಾಗಿ ಅರ್ಜಿ ಸಲ್ಲಿಕೆ

    ಬೆಂಗಳೂರು: ಬಿಗ್ ಬಾಸ್ ಕನ್ನಡ ಸ್ಪರ್ಧೆಯಲ್ಲಿ ಪಾಲ್ಗೊಂಡು, ಅಲ್ಲಿಯೇ ಪರಿಚಯವಾಗಿದ್ದಂತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ, ದಾಂಪತ್ಯಕ್ಕೆ ಕಾಲಿಟ್ಟಿತ್ತು. ಇದೀಗ ಕೆಲವೇ ವರ್ಷಗಳಲ್ಲೇ ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿ ವಿಚ್ಥೇದನಕ್ಕೆ ಇಬ್ಬರು ಸೆಲೆಬ್ರೆಟಿಗಳು ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ.

    Advertisement

    Rap ಸಾಂಗ್ ಹಾಡುಗಾರ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯ ಈಗ ಡಿವೋರ್ಸ್ ಹಂತಕ್ಕೆ ತಲುಪಿದೆ. ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಇದೀಗ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

    ಅಂದಹಾಗೇ ಕನ್ನಡದ ಬಿಗ್ ಬಾಸ್ ಸೀಸನ್-5ರಲ್ಲಿ ಕನ್ನಡ ರ್ಯಾಪ್ ಹಾಡುಗಳ ಮೂಲಕ ಮನೆ ಮಾತಾಗಿದ್ದಂತ ಚಂದನ್ ಶೆಟ್ಟಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಇದೇ ಬಿಗ್ ಬಾಸ್ ನಲ್ಲಿ ನಿವೇದಿತಾ ಕೂಡ ಪಾಲ್ಗೊಂಡಿದ್ದರು. ಇವರಿಬ್ಬರು ಆ ಸ್ಪರ್ಧೆಯಲ್ಲೇ ಪ್ರೀತಿಸೋದಕ್ಕೆ ಶುರು ಮಾಡಿದ್ದರು. ಬಿಗ್ ಬಾಸ್ ನಂತ್ರ ಮೈಸೂರಿನ ಯುವ ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಚಂದನ್ ಶೆಟ್ಟಿ, ನಿವೇದಿತಾಗೆ ಪ್ರಪೋಸ್ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

    ಈ ಬಳಿಕ ಚಂದನ್ ಶೆಟ್ಟಿ-ನಿವೇದಿತಾ ಮೈಸೂರಿನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಈ ಮೂಲಕ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಈಗ ಕೆಲವೇ ಕೆಲವು ವರ್ಷಗಳಲ್ಲೇ ದಾಂಪತ್ಯದಲ್ಲಿ ಬಿರುಕು ಕಂಡು, ವಿಚ್ಚೇದನಕ್ಕಾಗಿ ಇಬ್ಬರು ಸೆಲೆಬ್ರೆಟಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಅವರ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ.

     


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading